ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗುಂಪೊಂದು ಇಲ್ಲಿನ ಧನ್‌ಮೊಂಡಿ ಪ್ರದೇಶದಲ್ಲಿರುವ ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ ಮತ್ತು ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಂಗಬಂಧು ಮೆಮೋರಿಯಲ್ ಮ್ಯೂಸಿಯಂ ಸೇರಿದಂತೆ ಢಾಕಾದ ವಿವಿಧ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಸೋಮವಾರ ಮಧ್ಯಾಹ್ನ ಬೆಂಕಿ ಹಚ್ಚಿದರು ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಈ ಮ್ಯೂಸಿಯಂ ಅನ್ನು 1975ರಲ್ಲಿ ರಾಷ್ಟ್ರಪತಿಯಾಗಿದ್ದಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಸಮರ್ಪಿಸಲಾಗಿದೆ.

2010ರ ಮಾರ್ಚ್‌ನಲ್ಲಿ ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ದ್ವಿಪಕ್ಷೀಯ ಸಾಂಸ್ಕೃತಿಕ ಸಂಪರ್ಕವನ್ನು ಈ ಕೇಂದ್ರವು ಉತ್ತೇಜಿಸುತ್ತದೆ.
.ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.
ಈ ಕೇಂದ್ರವು ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಿಗೆ ಸಂಬಂಧಿಸಿದ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಒಳಗೊಂಡ ಗ್ರಂಥಾಲಯವನ್ನು ಹೊಂದಿದೆ.

ಹಿಂಸಾಚಾರ ಘಟನೆಗಳ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ.
.Bangla Unrest: ಹಸೀನಾ ವಿರುದ್ಧ ಸಾವನ್ನೂ ಲೆಕ್ಕಿಸದ ವಿದ್ಯಾರ್ಥಿಗಳ ಆಕ್ರೋಶ ಏಕೆ?.Bangla Unrest | ಕೋಲ್ಕತ್ತ-ಢಾಕಾ ಮೈತ್ರಿ ಎಕ್ಸ್ಪ್ರೆಸ್ ರೈಲು ರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.