ಕೊಲಂಬೊ: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಬುಧವಾರ ಆಯ್ಕೆಯಾಗಿದ್ದಾರೆ.

ಸಿಂಗಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಯಿಂದ ಶ್ರೀಲಂಕಾದ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಗೊಟಬಯ ರಾಜಪಕ್ಸ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಈವರಗೆ ರಾನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿದ್ದರು.

ಇಂದು ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಶ್ರೀಲಂಕಾದ ಪ್ರಧಾನಿಯೂ ಆಗಿರುವ ರಾನಿಲ್ ವಿಕ್ರಮಸಿಂಘೆ ವಿರುದ್ಧ ಶ್ರೀಲಂಕನ್ನರಿಗೆ ಅಪಾರ ಅಸಮಾಧಾನವಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಕಂಗೆಟ್ಟಿರುವ ಪ್ರತಿಭಟನಾಕಾರರು ಇತ್ತೀಚೆಗೆ ರಾನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ, ಆಕ್ರೋಶ ಹೊರಹಾಕಿದ್ದರು.

ಇದೀಗ ಅವರು ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಕ್ರೋಶ ಭುಗಿಲೇಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

73 ವರ್ಷದ ರಾನಿಲ್ ವಿಕ್ರಮಸಿಂಘೆ ಆರು ಬಾರಿ ಶ್ರೀಲಂಕಾದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ರಾನಿಲ್ 134 ಮತಗಳನ್ನು ಪಡೆದರೆ, ಭಿನ್ನ ಗುಂಪಿನ ನಾಯಕ 63 ವರ್ಷದ ಡುಲ್ಲಾಸ್ ಅಲಹಪ್ಪೆರುಮ ಅವರು 82 ಮತಗಳನ್ನು ಪಡೆದಿದ್ದಾರೆ. ಇತ್ತ 53 ವರ್ಷದ ಅರುಣಾ ಕುಮಾರ ಡಿಸ್ಸಾನಾಯಕೆ ಮೂರು ಮತಗಳನ್ನು ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.