ಬುಕಾರೆಸ್ಟ್: ರಷ್ಯಾದ ಆಕ್ರಮಣ ಆರಂಭವಾದ ನಂತರ 43,000 ಕ್ಕೂ ಹೆಚ್ಚು ಉಕ್ರೇನಿಯನ್ನರು ರೊಮೇನಿಯಾವನ್ನು ಪ್ರವೇಶಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ.

ಮೂರು ದಿನಗಳ ಹಿಂದೆ ರಷ್ಯಾವು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಆರಂಭಿಸಿದ ಬಳಿಕ 43,000 ಕ್ಕೂ ಹೆಚ್ಚು ಉಕ್ರೇನಿಯನ್ನರು ರೊಮೇನಿಯಾಕ್ಕೆ ಪಲಾಯನ ಮಾಡಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ (ಫೆ.24) ಉಕ್ರೇನ್ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿ ನಡೆಸಿವೆ.

ಓದಿ...ಮೊಮ್ಮಕ್ಕಳಿಗಾಗಿ ಉಕ್ರೇನ್ ಸೇನೆ ಸೇರಲು ಮುಂದಾದ 80 ವರ್ಷದ ವೃದ್ಧ: ಫೋಟೊ ವೈರಲ್

ಇದೀಗ ಉಕ್ರೇನ್ ರಾಜಧಾನಿ ಕೀವ್, ಖಾರ್ಕಿವ್ ನಗರವನ್ನು ವಶಪಡಿಸಿಕೊಳ್ಳಲು ರಷ್ಯಾ ಪಡೆಗಳು ಮುಂದಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಓದಿ..ಉಕ್ರೇನ್ ಮಹಿಳೆ ರಷ್ಯಾ ಸೈನಿಕರಿಗೆ ಸೂರ್ಯಕಾಂತಿ ಬೀಜ ಕೊಟ್ಟಿದ್ದೇಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.