ಕೀವ್: ಉಕ್ರೇನ್ನ ನಗರಗಳು, ವಿದ್ಯುತ್ ಉತ್ಪಾದನಾ ಘಟಕಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗುರಿಯಾಗಿಸಿ ರಷ್ಯಾ ಪಡೆಗಳು ಮಂಗಳವಾರ ವೈಮಾನಿಕ ದಾಳಿ ನಡೆಸಿವೆ.

ರಾಜಧಾನಿ ಕೀವ್ ಸೇರಿದಂತೆ, ದೇಶದಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಜನರು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.

‘ನಗರದ ವಸತಿ ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತದೇಹವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ’ ಎಂದು ಕೀವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

‘ವಸತಿ ಪ್ರದೇಶಗಳನ್ನು ಗುರಿಯಾಗಿಸಿಯೂ ದಾಳಿಗಳು ನಡೆದಿದ್ದು, ಪರಿಸ್ಥಿತಿ ಗಂಭೀರವಾಗಿದೆ’ ಎಂದು ಹಿರಿಯ ಅಧಿಕಾರಿ ಕಿರಿಲೊ ಟೈಮೊಶೆಂಕೊ ಹೇಳಿದ್ದಾರೆ.

‘ವಿದ್ಯುತ್ಅನ್ನು ಮಿತವಾಗಿ ಬಳಕೆ ಮಾಡುವಂತೆ ಕೀವ್ ನಗರದ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ದೇಶದ ಉಳಿದ ಭಾಗಗಳಲ್ಲಿಯೂ ಇದೇ ಕ್ರಮ ಅನುಸರಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.