ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಕ್ರೇನ್‌: ಕ್ಯಾನ್ಸರ್‌ ಆಸ್ಪತ್ರೆ ರೋಗಿಗಳ ಸ್ಥಳಾಂತರ

ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ದಾಳಿ ಬಳಿಕ ಕೈಗೊಂಡ ಕ್ರಮ
Published 11 ಜುಲೈ 2024, 15:35 IST
Last Updated 11 ಜುಲೈ 2024, 15:35 IST
ಅಕ್ಷರ ಗಾತ್ರ

ಕೀವ್‌: ಉಕ್ರೇನ್‌ನ ಅತಿದೊಡ್ಡ ಮಕ್ಕಳ ಆಸ್ಪತ್ರೆಯ ಮೇಲೆ ರಷ್ಯಾವು ಕ್ಷಿಪಣಿ ದಾಳಿ ನಡೆಸಿದ ಕಾರಣಕ್ಕಾಗಿ ಕೀವ್‌ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್‌ ಸಂಸ್ಥೆ ಆಸ್ಪತ್ರೆಯು ಮುನ್ನೆಚ್ಚರಿಕೆ ಕ್ರಮವಾಗಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದೆ. 

ರಷ್ಯಾ ದಾಳಿಯಿಂದ ಮಕ್ಕಳ ಆಸ್ಪತ್ರೆಯಲ್ಲಿ ಭಾರಿ ಹಾನಿ ಸಂಭವಿಸಿದ್ದು, ಇದರಿಂದ ಪೋಷಕರು ತೀವ್ರ ಆತಂಕಗೊಂಡಿದ್ದಾರೆ. ಅಲ್ಲದೇ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ತಮ್ಮ ಮಕ್ಕಳ ಮುಂದಿನ ಚಿಕಿತ್ಸೆಯನ್ನು ಎಲ್ಲಿ ಮುಂದುವರೆಸಬೇಕೆಂಬುದರ ಕುರಿತು  ಕಳವಳ ವ್ಯಕ್ತಪಡಿಸಿದ್ದಾರೆ. 

ಮಕ್ಕಳ ಆಸ್ಪತ್ರೆ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅಲ್ಲಿದ್ದ ಪೋಷಕರು ಘಟನೆಯು ಭಯಾನಕವಾಗಿತ್ತು ಎಂದು ವಿವರಿಸಿದ್ದಾರೆ. 

ಮಕ್ಕಳ ಆಸ್ಪತ್ರೆ ಮೇಲೆ ದಾಳಿ ನಡೆದ ಕೂಡಲೇ ಆಸ್ಪತ್ರೆಯ ಪುನರ್‌ನಿರ್ಮಾಣಕ್ಕಾಗಿ ನಿಧಿ ಸಂಗ್ರಹಣೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳು ಹರಿದಾಡಿವು. ಕೇವಲ ಮೂರು ದಿನಗಳಲ್ಲಿ ಇದಕ್ಕಾಗಿ ₹61 ಕೋಟಿ ಹಣ ರಾಷ್ಟ್ರೀಯ ನಿಧಿಯಲ್ಲಿ ಸಂಗ್ರಹವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT