ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಥರಸ್‌ ಕಾಲ್ತುಳಿತ ದುರಂತ: ಸಂತಾಪ ತಿಳಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

Published 3 ಜುಲೈ 2024, 11:40 IST
Last Updated 3 ಜುಲೈ 2024, 11:40 IST
ಅಕ್ಷರ ಗಾತ್ರ

ಮಾಸ್ಕೊ: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ.

‘ಉತ್ತರಪ್ರದೇಶದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸಂದೇಶವನ್ನು ಕಳುಹಿಸಿದ್ದಾರೆ’ ಎಂದು ಭಾರತದಲ್ಲಿರುವ ರಷ್ಯಾ ರಾಯಭಾರ ಕಚೇರಿ ತನ್ನ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

ಹಾಥರಸ್ ಜಿಲ್ಲೆಯ ಪೋಲರಾಯ್ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಸತ್ಸಂಗದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 121 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಮೃತಪಟ್ಟವರಲ್ಲಿ 108 ಮಹಿಳೆಯರು ಮತ್ತು 7 ಮಕ್ಕಳು ಸೇರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರ ವಿರುದ್ಧ ಉತ್ತರ ಪ್ರದೇಶದ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT