ನ್ಯೂಯಾರ್ಕ್: ಪಶ್ಚಿಮ ನ್ಯೂಯಾರ್ಕ್ನಲ್ಲಿ ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ.

ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು ಅವರ ಏಜೆಂಟ್ ತಿಳಿಸಿದ್ದಾರೆ.

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ: ಸಾಹಿತಿಗಳು ಸೇರಿದಂತೆ ಗಣ್ಯರಿಂದ ಖಂಡನೆ

ಮುಂಬೈ ಮೂಲದ ವಿವಾದಿತ ಲೇಖಕ ಸಲ್ಮಾನ್ ರಶ್ದಿ ಅವರನ್ನು ವೆಂಟಿಲೇಟರ್ನಲ್ಲಿರಿಸಲಾಗಿದ್ದು, ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಅವರ ಏಜೆಂಟ್ ಆಂಡ್ರ್ಯೂ ವೈಲಿ ತಿಳಿಸಿರುವುದಾಗಿ ನ್ಯೂಯಾರ್ಕ್ ಟೈಮ್ಸ್ (ಎನ್ವೈಟಿ) ವರದಿ ಮಾಡಿದೆ.

‘ಅವರ(ಸಲ್ಮಾನ್ ರಶ್ದಿ) ಆರೋಗ್ಯದ ಕುರಿತಾಗಿ ಒಳ್ಳೆಯ ಸುದ್ದಿಗಳು ಬರುತ್ತಿಲ್ಲ. ಸಲ್ಮಾನ್ ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ತೋಳಿನ ನರಗಳು ತುಂಡಾಗಿವೆ ಮತ್ತು ಅವರ ಯಕೃತ್ತು ಇರಿತದಿಂದ ಹಾನಿಗೊಳಗಾಗಿದೆ’ ಎಂದು ಆಂಡ್ರ್ಯೂ ವೈಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ದಿ ಸೆಟನಿಕ್ ವರ್ಸಸ್’ಕೃತಿ ಬರೆದ ನಂತರ ಹಲವು ವರ್ಷಗಳಿಂದ ಇಸ್ಲಾಮಿಸ್ಟ್ಗಳಿಂದ ಜೀವ ಬೆದರಿಕೆಗಳನ್ನು ಎದುರಿಸುತ್ತಿದ್ದ ರಶ್ದಿ, ಪಶ್ಚಿಮ ನ್ಯೂಯಾರ್ಕ್ ರಾಜ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ 24 ವರ್ಷದ ನ್ಯೂಜೆರ್ಸಿ ನಿವಾಸಿಯಿಂದ ಇರಿತಕ್ಕೊಳಗಾಗಿದ್ದರು.

ರಶ್ದಿಯನ್ನು ಇರಿದ ಆರೋಪಿಯನ್ನು ನ್ಯೂಜೆರ್ಸಿಯ ಫೇರ್ವ್ಯೂನ ಹದಿ ಮತರ್ (24) ಎಂದು ಗುರುತಿಸಲಾಗಿದೆ ಎಂದು ನ್ಯೂಯಾರ್ಕ್ ರಾಜ್ಯ ಪೊಲೀಸ್ನ ಮೇಜರ್ ಯುಜಿನ್ ಸ್ಟಾನಿಸ್ಜೆವ್ಸ್ಕಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನೈಋತ್ಯ ನ್ಯೂಯಾರ್ಕ್ ರಾಜ್ಯದ ಚೌಟಕ್ವಾ ಸಂಸ್ಥೆಯ ವೇದಿಕೆಯಲ್ಲಿದ್ದ ರಶ್ದಿ (75) ಅವರ ಕುತ್ತಿಗೆಗೆ ಚಾಕುವಿನಿಂದ ಇರಿಯಲಾಗಿತ್ತು.

ತುರ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಬರುವವರೆಗೂ ಪ್ರೇಕ್ಷಕರಲ್ಲಿ ಇದ್ದ ಒಬ್ಬ ವೈದ್ಯರು ರಶ್ದಿ ಅವರಿಗೆ ಚಿಕಿತ್ಸೆ ನೀಡಿದರು ಎಂದು ಸ್ಟಾನಿಸ್ಜೆವ್ಸ್ಕಿ ಹೇಳಿದರು. ರಶ್ದಿಯವರಿಗೆ ‘ವೈದ್ಯರು ತಕ್ಷಣವೇ ಪ್ರಥಮ ಚಿಕಿತ್ಸೆ ಆರಂಭಿಸಿದರು’ಎಂದು ಅವರು ತಿಳಿಸಿದ್ದಾರೆ. ಬಳಿಕ, ಲೇಖಕರನ್ನು ವಿಮಾನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಓದಿ..ಅಮೆರಿಕ: ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿಗೆ 10-15 ಬಾರಿ ಇರಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.