ನವದೆಹಲಿ(ಪಿಟಿಐ): ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗತವಾಗಿ ಹಾಜರಾಗಲು ಉದ್ಯಮಿ ವಿಜಯ್ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಕಡೆಯ ಅವಕಾಶವನ್ನು ನೀಡಿದೆ.

ಸುಮಾರು ₹ 9000 ಕೋಟಿಯಷ್ಟು ಬ್ಯಾಂಕ್ ಸಾಲವನ್ನು ಸುಸ್ತಿ ಉಳಿಸಿಕೊಂಡಿರುವ ಪ್ರಕರಣದಲ್ಲಿ, ವ್ಯಕ್ತಿಗತವಾಗಿ ಅಥವಾ ತಮ್ಮ ವಕೀಲರ ಮೂಲಕ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಮಲ್ಯ ಅವರಿಗೆ ಈ ಸಂಬಂಧ ಈಗಾಗಲೇ ಹಲವು ಅವಕಾಶ ನೀಡಲಾಗಿದೆ. ಅಲ್ಲದೆ, ನವೆಂಬರ್ 30, 2021ರಂದು ನೀಡಿದ ಆದೇಶದಲ್ಲಿ ಸ್ಪಷ್ಟ ನಿರ್ದೇಶನವನ್ನು ನೀಡಲಾಗಿತ್ತು ಎಂದು ಕೋರ್ಟ್ ಉಲ್ಲೇಖಿಸಿತು.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್, ಪಿ.ಎಸ್.ನರಸಿಂಹ ಅವರಿದ್ದ ಪೀಠವು, ವಿಚಾರಣೆಯನ್ನು ಎರಡು ವಾರಕ್ಕೆ ಮುಂದೂಡಿದರು. ನ.30ರ ಆದೇಶದಂತೆ ಅವರು ಹಾಜರಾಗಬೇಕು. ಇಲ್ಲದಿದ್ದರೆ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದೂ ಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.