ನವದೆಹಲಿ:ಜಲ್ಲಿಕಟ್ಟುಕ್ರೀಡೆಗೆ ತಮಿಳುನಾಡು ಸರ್ಕಾರ ಮತ್ತು ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಮಹಾರಾಷ್ಟ್ರ ಸರ್ಕಾರ ಅವಕಾಶ ಕಲ್ಪಿಸಿರುವುದನ್ನು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪೀಠವು, ತಮಿಳುನಾಡು ಸರ್ಕಾರ ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಮುಕುಲ್ ರೋಹಟಗಿ ಸೇರಿ, ಈ ವಿಷಯ ಸಂಬಂಧ ಸಲ್ಲಿಕೆಯಾಗಿರುವ ಇತರರ ಅರ್ಜಿಗಳ ಪರ ವಕೀಲರ ವಾದಗಳನ್ನು ಆಲಿಸಿತು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್, ಸಿ.ಟಿ. ರವಿಕುಮಾರ್ ಅವರು ಇರುವ ಸಾಂವಿಧಾನಿಕ ಪೀಠವು,ಒಂದು ವಾರದೊಳಗೆ ಲಿಖಿತವಾಗಿ ತಮ್ಮ ಸಮಗ್ರವಾದ ಕ್ರೋಡಿಕೃತ ಅಹವಾಲನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.