ಪೇಶಾವರ: ಪಾಕಿಸ್ತಾನದ ಖೈಬರ್ ಪಕ್ತುಂಖ್ವಾ ಪ್ರದೇಶದ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ.

ದೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ದರಾಬನ್ ಪ್ರದೇಶದ ಚೆಕ್ ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದು, ಈ ಚಕಮಕಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

20 ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೂಡಲೇ ಸ್ಥಳಕ್ಕೆ ಮತ್ತಷ್ಟು ಸೇನಾ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಈವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಬುಧವಾರ ಇದೇ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು ಭಯೋತ್ಪಾದಕರ ನಾಯಕ ಸೇರಿದಂತೆ ಒಟ್ಟು 9 ಉಗ್ರರನ್ನು ಹತ್ಯೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.