ನ್ಯೂಯಾರ್ಕ್: ತಮ್ಮ ಶಾಲೆಯ ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಆರೋಪದಲ್ಲಿ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಆರು ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.

ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎಂಬುವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದರು.

ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು. ತಾವು ಕೆಲಸ ಮಾಡುವ ಶಾಲೆಗಳಲ್ಲಿ 15 ರಿಂದ 16 ವರ್ಷದೊಳಗಿನ ಬಾಲಕರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಬಳಿಕ ಶಾಲೆಯ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಬಂಧನಕ್ಕೆ ಒಳಗಾಗಿರುವ ಶಿಕ್ಷಕಿಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿಕ್ಷಕಿಯರು ವಿದ್ಯಾರ್ಥಿಗಳೊಂದಿಗೆ ಸಂಬಂಧ ಹೊಂದಿದ್ದರು ಎಂಬುದು ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.