ಶಾಂಘೈ: ಚೀನಾದ ಎರಡನೇ ಅತಿ ದೊಡ್ಡ ನಗರ ಶಾಂಘೈನಲ್ಲಿ ಕೋವಿಡ್‌ನಿಂದಾಗಿ ಮೃತಪಡುವವರ ಸಂಖ್ಯೆ ಹೆಚ್ಚುತ್ತಿದೆ. ಗುರುವಾರ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಜನರ ವಿರೋಧದ ನಡುವೆಯೇ ಏಪ್ರಿಲ್ 26ರ ವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದೆ.

ಈ ಮೂಲಕ, ಓಮೈಕ್ರಾನ್ ತಳಿ ಸೋಂಕಿನ ಪ್ರಕರಣಗಳು ಹೆಚ್ಚಿದ ಬಳಿಕ ಜಾರಿಗೊಳಿಸಿರುವ ಲಾಕ್‌ಡೌನ್ ನಾಲ್ಕನೇ ವಾರಕ್ಕೆ ಕಾಲಿಟ್ಟಂತಾಗಿದೆ. ಸೋಂಕು ಹೆಚ್ಚಾಗುತ್ತಿರುವ ಪ್ರದೇಶಗಳಲ್ಲಿ ಮುಂದಿನ ಮಂಗಳವಾರದ ವರೆಗೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಮುದಾಯದಲ್ಲಿ ಸೋಂಕು ಪ್ರಸರಣಕ್ಕೆ ಕಡಿವಾಣ ಹಾಕಲು ಶುಕ್ರವಾರದಿಂದ ಅಭಿಯಾನ ಆರಂಭಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಗುರುವಾರ 2,119 ಹೊಸ ಪ್ರಕರಣಗಳು ವರದಿಯಾಗಿವೆ. ಇದರದಲ್ಲಿ 1,931 ಪ್ರಕರಣಗಳು ಶಾಂಘೈನಲ್ಲಿಯೇ ಪತ್ತೆಯಾಗಿವೆ ಎಂದು ಚೀನಾದ ಆರೋಗ್ಯ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.