ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೆನ್ಸಿಲ್ವೇನಿಯಾದ ರ‍್ಯಾಲಿಯಲ್ಲಿ ಗುಂಡಿನ ದಾಳಿ: ಟ್ರಂಪ್ ಪ್ರಾಣಾಪಾಯದಿಂದ ಪಾರು

Published : 14 ಜುಲೈ 2024, 1:58 IST
Last Updated : 14 ಜುಲೈ 2024, 1:58 IST
ಫಾಲೋ ಮಾಡಿ
Comments

ಪೆನ್ಸಿಲ್ವೇನಿಯಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಡೊನಾಲ್ಡ್‌ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಂಡ ತಿಳಿಸಿದೆ. ಘಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಆಘಾತ ವ್ಯಕ್ತಪಡಿಸಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಬಟ್ಲರ್‌ನಲ್ಲಿ ಹಮ್ಮಿಕೊಂಡಿದ್ದ ಹೊರಾಂಗಣ ರ‍್ಯಾಲಿಯನ್ನು ಉದ್ದೇಶಿಸಿ ಟ್ರಂಪ್ ಭಾಷಣ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಬಂದೂಕುಧಾರಿ ಗುಂಡು ಹಾರಿಸಿದ್ದಾನೆ. ಕೂಡಲೇ ವೇದಿಕೆ ಬಳಿಯಿದ್ದ ಭದ್ರತಾ ಸಿಬ್ಬಂದಿ ಟ್ರಂಪ್‌ ನೆರವಿಗೆ ಧಾವಿಸಿದ್ದಾರೆ.

ಟ್ರಂಪ್ ಗಾಯಗೊಂಡಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ. ಟ್ರಂಪ್‌ ಕಿವಿ ಮತ್ತು ಮುಖದ ಮೇಲೆ ಗಾಯವಾಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿಯಬೇಕಿದೆ.

ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ‘ಪಿಟಿಐ’ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT