ಕೊಲಂಬಿಯಾ: ಕಪ್ಪು ವರ್ಣೀಯ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಯೋಧನನ್ನು ಸೌಥ್ ಕರೊಲಿನಾದಲ್ಲಿ ಬುಧವಾರ ಬಂಧಿಸಲಾಗಿದೆ.

ಹಲ್ಲೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ, ಯೋಧನ ವಿರುದ್ಧ ಆರೋಪಪಟ್ಟಿ ಹೊರಿಸಿ ಬಂಧಿಸಲಾಗಿದೆ. ಆರೋಪಿ ಜೊನಾಥನ್ ಪೆಂಟ್ಲಾಂಡ್ (42) ಅವರನ್ನು ರಿಚ್ಲಾಂಡ್ ಕೌಂಟಿ ಜೈಲಿನಲ್ಲಿರಿಸಲಾಗಿದೆ.

ಹಲ್ಲೆ ನಡೆಸಿದ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಮಹಿಳೆಯೊಬ್ಬರು ಸೋಮವಾರ ಹಂಚಿಕೊಂಡಿದ್ದರು. ಈ ವಿಡಿಯೊವನ್ನು ಸಾವಿರಾರು ಮಂದಿ ಹಂಚಿಕೊಂಡಿದ್ದರು.

‘ನೀನು ಇಲ್ಲಿಂದ ತೆರಳಬೇಕು. ನೀನು ಇಲ್ಲಿ ಏನು ಮಾಡುತ್ತಿರುವೆ’ ಎಂದು ಬೆದರಿಕೆ ಹಾಕಿದ ಯೋಧ ಹಲ್ಲೆ ಮಾಡಿದ್ದಾರೆ. ಬಳಿಕ ವ್ಯಕ್ತಿಯನ್ನು ಕೆಳಗೆ ತಳ್ಳುತ್ತಿರುವುದು ವಿಡಿಯೊದಲ್ಲಿದೆ.

ಈ ಘಟನೆ ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳು ಸಹ ಪೆಂಟ್ಲಾಂಡ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ದೂರವಾಣಿಯನ್ನು ಕಸಿದುಕೊಂಡಿದ್ದಾರೆ ಎಂದು ವಿಡಿಯೊ ಪೋಸ್ಟ್ ಮಾಡಿದ್ದ ಮಹಿಳೆ ಶಿರೆಲ್ ಜಾನ್ಸನ್ ತಿಳಿಸಿದ್ದಾರೆ.

ಇಡೀ ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.