ಇಸ್ಲಾಮಾಬಾದ್: ಅಧಿಕೃತ ರಹಸ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ವಿಶೇಷ ಕೋರ್ಟ್ ಸ್ಥಾಪಿಸಿದೆ.

ಇದರ ಬೆನ್ನಲ್ಲೇ ರಾಜತಾಂತ್ರಿಕ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ವಿದೇಶಾಂಗ ಸಚಿವ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತ ಶಾ ಮಹಮ್ಮದ್ ಕುರೇಶಿ ಅವರನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರುಪಡಿಸಲಾಯಿತು.

ಕುರೇಶಿ ವಿದೇಶಾಂಗ ಸಚಿವರಾಗಿದ್ದ ಅವಧಿಯಲ್ಲಿ ಅಮೆರಿಕದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯು ವಿದೇಶಾಂಗ ಇಲಾಖೆಗೆ ಕಳುಹಿಸಿದ್ದ ಸಂದೇಶವನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಅಧಿಕೃತ ರಹಸ್ಯ ಕಾಯ್ದೆ ಅಡಿಯಲ್ಲಿ ಅವರನ್ನು ಫೆಡರಲ್ ತನಿಖಾ ಸಂಸ್ಥೆ (ಎಫ್ಐಎ) ಶನಿವಾರ ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.