ಕೊಲೊಂಬೊ: ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲವು ಬಂಧನ ವಾರೆಂಟ್ ಹೊರಡಿಸಿರುವ ಬೆನ್ನಲ್ಲೇ, ತನ್ನ ನೆಲದಲ್ಲಿ ಅದಾನಿ ಹೂಡಿಕೆಯ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಕುರಿತು ಮಾಹಿತಿ ನೀಡಿದ ಸರ್ಕಾರದ ವಕ್ತಾರ ನಳಿಂದಾ ಜಯತಿಸ್ಸಾ, ‘ಅಧ್ಯಕ್ಷ ಅನುರಾ ದಿಸ್ಸನಾಯಕೆ ಅವರು ನಡೆಸಿದ ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದ್ದು, ಭಾರತ ಮೂಲದ ಅದಾನಿ ನಿರ್ಮಾಣ ಸಂಸ್ಥೆಯು ಶ್ರೀಲಂಕಾದಲ್ಲಿ ಹೂಡಿಕೆ ಮಾಡಿರುವ ಯೋಜನೆಗಳ ಕುರಿತು ಹಣಕಾಸು ಹಾಗೂ ವಿದೇಶಾಂಗ ಸಚಿವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು’ ಎಂದಿದ್ದಾರೆ.

‘ಅದಾನಿ ಹೂಡಿಕೆ ಕುರಿತು ಎರಡು ತನಿಖೆಗಳು ನಡೆಯಲಿವೆ. ಇವುಗಳು ನೀಡುವ ವರದಿಯನ್ನು ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ’ ಎಂದಿದ್ದಾರೆ.
.ಲಂಚ, ವಂಚನೆ ಪ್ರಕರಣ: ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ.ಸದನದಲ್ಲಿ ‘ಅದಾನಿ ಗದ್ದಲ’: ಜಂಟಿ ಸಂಸದೀಯ ಸಮಿತಿ ರಚನೆಗೆ ವಿಪಕ್ಷ ಪಟ್ಟು.
ದಿಸ್ಸನಾಯಕೆ ಅವರು ಕಳೆದ ಸೆಪ್ಟೆಂಬರ್ನಲ್ಲಿ ಅಧಿಕಾರ ವಹಿಸಿಕೊಂಡ ನಂತರ, ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ, ಶ್ರೀಲಂಕಾದಿಂದ ದೋಚಿ ವಿದೇಶದಲ್ಲಿ ಬಚ್ಚಿಟ್ಟಿರುವ ದೇಶದ ಆಸ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದರು.

ಭಾರತ ಮೂಲದ ಬಹುಕೋಟಿ ಒಡೆಯ ಉದ್ಯಮಿ ಗೌತಮ್ ಅದಾನಿ ಅವರು ಭಾರತದಲ್ಲಿ ಕೈಗೊಳ್ಳಲು ಯೋಜಿಸಿರುವ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಅಧಿಕಾರಿಗಳಿಗೆ ₹2 ಸಾವಿರ ಕೋಟಿಯಷ್ಟು ಲಂಚ ನೀಡಿರುವುದು ಹಾಗೂ ಅಮೆರಿಕದ ಹೂಡಿಕೆದಾರರ ದಿಕ್ಕು ತಪ್ಪಿಸಲು ಸುಳ್ಳು ಹೇಳಿ ವಂಚಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಮೆರಿಕದ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಆದರೆ ಈ ಆರೋಪಗಳು ನಿರಾಧಾರ ಎಂದು ಅದಾನಿ ಸಮೂಹ ಹೇಳಿದೆ.

ಪವನ ವಿದ್ಯುತ್ ಯೋಜನೆಗಾಗಿ ಅದಾನಿ ಸಮೂಹವು ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ 44.2 ಕೋಟಿ ಅಮೆರಿಕನ್ ಡಾಲರ್ನಷ್ಟು ಹೂಡಿಕೆ ಮಾಡಿದೆ. ಆದರೆ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯೋಜನೆ ಕೈಗೊಳ್ಳದಂತೆ ನ್ಯಾಯಾಲಯ ತಡೆ ನೀಡಿದೆ.
.ಅದಾನಿ ಲಂಚ ಪ್ರಕರಣ: ತನಿಖೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ.ಬಾಂಗ್ಲಾ: ಅದಾನಿ ಸಮೂಹದ ಇಂಧನ ಯೋಜನೆ ಪರಿಶೀಲನೆ.
ಮತ್ತೊಂದೆಡೆ ಕೊಲೊಂಬೊದಲ್ಲಿ ಸಮುದ್ರದಾಳದ ಬಂದರು ಟರ್ಮಿನಲ್ ನಿರ್ಮಾಣಕ್ಕಾಗಿ ಅದಾನಿ ಕಂಪನಿಗೆ ಅಮೆರಿಕದ ಅಂತರರಾಷ್ಟ್ರೀಯ ಅಭಿವೃದ್ಧಿ ಹಣಕಾಸು ನಿಗಮವು 55.3 ಕೋಟಿ ಅಮೆರಿಕನ್ ಡಾಲರ್ ಆರ್ಥಿಕ ನೆರವು ನೀಡಿತ್ತು.

ಅಮೆರಿಕದಲ್ಲಿ ಅದಾನಿ ಸಮೂಹದ ವಿರುದ್ಧ ನಡೆಯುತ್ತಿರುವ ವಿಚಾರಣೆ ನಂತರ, ನೈರೋಬಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಒಳಗೊಂಡಂತೆ ಕೆನ್ಯಾದಲ್ಲೂ ಅದಾನಿ ಸಮೂಹ ಕೈಗೊಂಡಿರುವ 2.5 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ಅಲ್ಲಿನ ಸರ್ಕಾರ ರದ್ದುಪಡಿಸಿದೆ.
.ಕೆನ್ಯಾ ಜೊತೆ ಒಪ್ಪಂದ ಮಾಡಿಕೊಂಡಿಲ್ಲ: ಅದಾನಿ ಸಮೂಹ ಸ್ಪಷ್ಟನೆ.ಕೇಂದ್ರ ಸೂಚಿಸಿದರೆ ಅದಾನಿ ಕಂಪನಿ ವಿರುದ್ಧ ಕ್ರಮ: ಡಿಕೆಶಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.