ಕೊಲಂಬೊ:ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಇತ್ತೀಚೆಗಷ್ಟೇ ಸರ್ಕಾರಿ ವಿರೋಧಿ ಪ್ರತಿಭಟನಕಾರರ ಮೇಲೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ, ಅವರ ಪುತ್ರ ನಮಲ್ ರಾಜಪಕ್ಸ ಹಾಗೂ ಇತರ 15 ಮಂದಿ ದೇಶಬಿಟ್ಟು ಹೋಗದಂತೆ ಸ್ಥಳೀಯ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.

‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಸಂಚು ರೂಪಿಸಿ, ಈ ದಾಳಿಗಳನ್ನು ಯೋಜಿಸಿದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಹೊರದೇಶಗಳಿಗೆ ಪ್ರಯಾಣಿಸದಂತೆ ನಿರ್ಬಂಧ ಹೇರಬೇಕು’ ಎಂದು ಅಟಾರ್ನಿ ಜನರಲ್ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

ಇವನ್ನೂ ಓದಿ
*ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ಇಂದು ರಾಜೀನಾಮೆ ಸಾಧ್ಯತೆ
*ಶ್ರೀಲಂಕಾ| ರಾಜೀನಾಮೆ ಬಳಿಕ ಈಗ ಮಹಿಂದಾ ರಾಜಪಕ್ಸ ಬಂಧನಕ್ಕೆ ಆಗ್ರಹ
*ಲಂಕಾ ದಹನ: ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸ ಭಾರತಕ್ಕೆ ಪಲಾಯನ ಮಾಡಿದರೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.