ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಶೇ 75ಕ್ಕೂ ಹೆಚ್ಚು ಮತದಾನ

Published : 21 ಸೆಪ್ಟೆಂಬರ್ 2024, 15:44 IST
Last Updated : 21 ಸೆಪ್ಟೆಂಬರ್ 2024, 15:44 IST
ಫಾಲೋ ಮಾಡಿ
Comments

ಕೊಲಂಬೊ: ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ಶ್ರೀಲಂಕಾದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ನಡೆದ ಚುನಾವಣೆಯಲ್ಲಿ ಶೇ 75ಕ್ಕೂ ಹೆಚ್ಚು ಮತದಾನವಾಗಿದ್ದು, ಎಣಿಕೆ ಕಾರ್ಯ ಆರಂಭವಾಗಿದೆ.

ಮತದಾನ ಪ್ರಕ್ರಿಯೆ ವೇಳೆ ಹಿಂಸಾಚಾರ ಸೇರಿದಂತೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸುಮಾರು 1.7 ಕೋಟಿ ಜನರು ಮತ ಚಲಾಯಿಸಲು ಅರ್ಹತೆ ಹೊಂದಿದ್ದರು. ಒಟ್ಟು 13,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಚುನಾವಣೆ ನಡೆಸಲು 2 ಲಕ್ಷಕ್ಕೂ ಹೆಚ್ಚು ಅಧಿಕಾರಿಗಳನ್ನು ಮತ್ತು ಬಂದೋಬಸ್ತ್‌ಗಾಗಿ 63 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

1982ರ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ತೀವ್ರ ಪೈಪೋಟಿ ಎದುರಾಗಿತ್ತಲ್ಲದೇ, 38 ಅಭ್ಯರ್ಥಿಗಳು ಕಣದಲ್ಲಿದ್ದರು.

ಬೌದ್ಧ ದೇವಾಲಯದ ಸಭಾಂಗಣಗಳು, ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನೂ ಮತದಾನ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಯವರೆಗೆ ನಡೆಯಿತು.

ದ್ವೀಪ ರಾಷ್ಟ್ರದಲ್ಲಿ 2022ರಲ್ಲಿ ನಡೆದ ಜನತಾ ದಂಗೆಯು ಗೋಟಬಯ ರಾಜಪಕ್ಷ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿತ್ತು. ಅವರು ದೇಶಬಿಟ್ಟು ಪಲಾಯನ ಮಾಡಿದ ಬಳಿಕ 75 ವರ್ಷದ ರನಿಲ್‌ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ಸಂಸತ್ತು ಆಯ್ಕೆ ಮಾಡಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT