ಕೊಲಂಬೊ: ದ್ವೀಪರಾಷ್ಟ್ರ ಶ್ರೀಲಂಕಾದ ಸಂಸತ್ತಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪವರ್ ಪಕ್ಷಕ್ಕೆ ಇದು ಮೊದಲ ಅಗ್ನಿ ಪರೀಕ್ಷೆಯಾಗಿದೆ.

ದೇಶದಾದ್ಯಂತ 13,314 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಸ್ಥಳೀಯ ಕಾಲಮಾನ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಮತದಾನ ಮುಗಿದ ಕೂಡಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

225 ಸದಸ್ಯ ಬಲದ ಸಂಸತ್ತಿಗೆ ಚುನಾವಣೆ ನಡೆಯುತ್ತಿದ್ದು, 17 ಲಕ್ಷ ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಭದ್ರತೆಗಾಗಿ ಸುಮಾರು 90 ಸಾವಿರ ಪೊಲೀಸ್ ಮತ್ತು ಮಿಲಿಟರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಳೆದ ತಿಂಗಳ ಅಧ್ಯಕ್ಷೀಯ ಚುನಾವಣೆಯಲ್ಲಿ ದಿಸ್ಸನಾಯಕೆ ವಿರುದ್ಧ ಸೋತಿದ್ದ ರಾನಿಲ್ ವಿಕ್ರಮಸಿಂಘೆ ಅವರು ಇದೇ ಮೊದಲ ಬಾರಿಗೆ ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ರಾಜಪಕ್ಸೆ ಸಹೋದರಾದ ಮಹಿಂದಾ, ಗೊಟಬಯ, ಚಮಲ್ ಮತ್ತು ಬೆಸಿಲ್ ಸಹ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ .

ಅಲ್ಲದೇ ಹಿಂದಿನ ಸರ್ಕಾರದ ಹಲವು ಸಚಿವರು ಹಾಗೂ ಸಂಸದರೂ ಚುನಾವಣಾ ಕಣದಿಂದ ಹೊರಗುಳಿದಿದ್ದಾರೆ.

ರಾಷ್ಟ್ರದಲ್ಲಿ 2022ರಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.
.ಶ್ರೀಲಂಕಾ ಸಂಸತ್ತಿಗೆ ಇಂದು ಚುನಾವಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.