ನೈರೋಬಿ : ಯುಗಾಂಡಾದ ಅಥ್ಲೀಟ್ ಬೆಂಜಮಿನ್ ಕಿಪ್ಲಗ್ಯಾಟ್ (34) ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಎಲ್ಡೊರೆಟ್‌ನ ರಿಫ್ಟ್ ವ್ಯಾಲಿ ಪಟ್ಟಣದ ಮ್ಯಾಜಿಸ್ಟ್ರೇಟ್ಸ್ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡೇವಿಡ್ ಎಖೈ ಲೋಕೆರೆ (25) ಮತ್ತು ಪೀಟರ್ ಉಶುರು ಖಲುಮಿ (30) ಅವರನ್ನು ಸೋಮವಾರ ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಅವರನ್ನು 21 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಯಿತು.

ಕಿಪ್ಲಗ್ಯಾಟ್ 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಒಲಿಂಪಿಕ್ಸ್, ವಿಶ್ವ ಚಾಂಪಿಯನ್‌ಷಿಪ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಕೂಟಗಳಲ್ಲಿ ಯುಗಾಂಡವನ್ನು ಪ್ರತಿನಿಧಿಸಿದ್ದಾರೆ. ಅವರ ಮೃತದೇಹ ಶನಿವಾರ ಕಾರಿನಲ್ಲಿ ಪತ್ತೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.