ನ್ಯೂಯಾರ್ಕ್:ಶಸ್ತ್ರಸಜ್ಜಿತ 18 ವರ್ಷದ ಯುವಕನೊಬ್ಬ ಇಲ್ಲಿನ ಬಫಲೊ ನಗರದ ಸೂಪರ್‌ಮಾರ್ಕೆಟ್‌ನಲ್ಲಿಶನಿವಾರ 'ಜನಾಂಗೀಯ ಪ್ರೇರಿತ' ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 10 ಮಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷಾ ಕವಚ ಹಾಗೂ ಹೆಲ್ಮೆಟ್ ಧರಿಸಿ ಕೃತ್ಯವೆಸಗಿದಬಂದೂಕುಧಾರಿಯನ್ನು ಸದ್ಯ ಬಂಧಿಸಲಾಗಿದೆ ಎಂದು ಬಫಲೊ ಪೊಲೀಸ್ ಕಮಿಷನರ್ ಜೋಸೆಫ್ ಗ್ರಾಮಗ್ಲಿಯಾ ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಸಂತ್ರಸ್ತರಲ್ಲಿ 11 ಮಂದಿ ಆಫ್ರಿಕನ್ ಅಮೆರಿಕನ್ನರು.ದುಷ್ಕರ್ಮಿಯು ದಾಳಿ ಕೃತ್ಯವನ್ನು ಕ್ಯಾಮರಾದಲ್ಲಿ ಲೈವ್ ಸ್ಟ್ರೀಮ್ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಮೊದಲು ಪಾರ್ಕಿಂಗ್ ಸ್ಥಳದಲ್ಲಿದ್ದ ನಾಲ್ಕು ಜನರ ಮೇಲೆ ಗುಂಡಿನ ದಾಳಿ ನಡೆಸಿದ ಬಂಧಿತ ಆರೋಪಿ, ಬಳಿಕ ಸೂಪರ್‌ಮಾರ್ಕೆಟ್ ಒಳಗೆ ನುಗ್ಗಿ ದಾಳಿ ಮಾಡಿದ್ದಾನೆ.ಮೃತಪಟ್ಟವರಲ್ಲಿ ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು (ನಿವೃತ್ತ ಪೊಲೀಸ್ ಅಧಿಕಾರಿ) ಮೃತಪಡುವ ಮುನ್ನ ದಾಳಿಕೋರನ ಮೇಲೆ ಹಲವು ಸುತ್ತಿನ ಪ್ರತಿದಾಳಿ ನಡೆಸಿದ್ದರು ಎಂದು ಗ್ರಾಮಗ್ಲಿಯಾ ವಿವರಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ ಬಳಿಕ, ದಾಳಿಕೋರ ತನ್ನ ಕುತ್ತಿಗೆ ಬಳಿಗೆ ಗನ್ ಹಿಡಿದುಕೊಂಡು ಶರಣಾಗಿದ್ದಾನೆ ಎಂದಿದ್ದಾರೆ.

'ಈ ಪ್ರಕರಣವನ್ನು ನಾವು 'ದ್ವೇಷ ಅಪರಾಧ' ಮತ್ತು 'ಜನಾಂಗೀಯ ಪ್ರೇರಿತ ಉಗ್ರ ಕೃತ್ಯ'ವೆಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ' ಎಂದು ಬಫಲೊದಲ್ಲಿರುವ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಕಚೇರಿಯ ಉಸ್ತುವಾರಿ ಅಧಿಕಾರಿ ಸ್ಟೀಫನ್ ಬೆಲೊಂಗಿಯಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.