ಢಾಕಾ: ಪ್ರಯಾಣಿಕ ರೈಲೊಂದು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಕನಿಷ್ಠ 20 ಪ್ರಯಾಣಿಕರು ಮೃತಪಟ್ಟ ಘಟನೆ ಬಾಂಗ್ಲಾದೇಶದಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶೋರ್‌ಗಂಜ್‌ನಿಂದ ಢಾಕಾಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಸಂಜೆ 4:15 ರ ಸುಮಾರಿಗೆ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಇದುವರೆಗೆ 20 ಮೃತದೇಹಗಳು ಪತ್ತೆಯಾಗಿವೆ ಎಂದು ಭೈರಬ್ ರೈಲ್ವೆ ನಿಲ್ದಾಣದ ಪೊಲೀಸ್ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ವರದಿಯಾಗಿದೆ.

ಹಾನಿಗೊಳಗಾದ ಬೋಗಿಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.