ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುಟುಂಬಕ್ಕೆ ಸೇರಿರುವ ಸಂಸ್ಥೆಗಳಿಗೆ ತೆರಿಗೆ ವಂಚನೆ ಪ್ರಕರಣದಲ್ಲಿ ನ್ಯಾಯಾಧೀಶರು ದಂಡ ವಿಧಿಸಿದ್ದಾರೆ. ಮುಂದಿನ ಅಧ್ಯಕ್ಷೀಯ ಚುನಾವಣೆ ಎದುರು ನೋಡುತ್ತಿರುವ ಟ್ರಂಪ್ಗೆ ಈ ತೀರ್ಪಿನಿಂದ ಹಿನ್ನಡೆಯಾಗುವ ಸಾಧ್ಯತೆಯಿದೆ.

ಟ್ರಂಪ್ ಆರ್ಗನೈಸೆಷನ್ ಮತ್ತು ಟ್ರಂಪ್ ಪೇರೋಲ್ ಕಾರ್ಪ್ಗಳು ತೆರಿಗೆ ವಂಚಿಸಿರುವುದು ಎಲ್ಲ ರೀತಿಯಿಂದಲೂ ಸಾಬೀತಾಗಿದೆ. ಮೊದಲ ಸಲ ಈ ಕಂಪನಿಗಳು ಅಪರಾಧಗಳಿಗಾಗಿ ಶಿಕ್ಷೆ ಅನುಭವಿಸಿವೆ.

"ಇದು ದುರಾಸೆ ಮತ್ತು ವಂಚನೆಗೆ ಸಂಬಂಧಿಸಿದ ಪ್ರಕರಣವಾಗಿದೆ" ಎಂದು ಪ್ರಕರಣವನ್ನು ವಿಚಾರಣೆ ನಡೆಸಿದ ಮ್ಯಾನ್ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಹೇಳಿದರು.

ಟ್ರಂಪ್ ಅವರ ಮೇಲೆ ವೈಯಕ್ತಿಕವಾಗಿ ಆರೋಪ ಹೊರಿಸಲಾಗಿಲ್ಲ . ಆದರೆ ಅವರ ಹೆಸರನ್ನು ಹೊಂದಿರುವ ರಿಯಲ್ ಎಸ್ಟೇಟ್, ಹೋಟೆಲ್ ಮತ್ತು ಗಾಲ್ಫ್ ವ್ಯವಹಾರ ನಡೆಸುತ್ತಿರುವ ಸಂಸ್ಥೆಗಳು ಶಿಕ್ಷೆಗೊಳಗಾಗಿವೆ. 2024 ರಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕ್ ಪಕ್ಷದಿಂದ ನಾಮನಿರ್ದೇಶನವನ್ನು ಬಯಸುತ್ತಿರುವ ಟ್ರಂಪ್ ಖ್ಯಾತಿಗೆ ಈ ಪ್ರಕರಣ ಕುತ್ತು ತರುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.