ಮಾಲಿ: ಪಶ್ಚಿಮ ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು 70 ಜನರು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನೈಋತ್ಯ ಕೌಲಿಕೊರೊ ಪ್ರದೇಶದ ಕಂಗಾಬಾ ಜಿಲ್ಲೆಯ ಸಹೇಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಣಿಯ ಒಳಗೆ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡವರ ಬಗ್ಗೆ ನಿಖರವಾದ ಮಾಹಿತಿಗಳು ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ 200ಕ್ಕೂ ಹೆಚ್ಚು ಜನರು ಗಣಿ ಕೆಲಸದಲ್ಲಿ ತೊಡಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಮಾಲಿ ಸಚಿವಾಲಯ ತಿಳಿಸಿದೆ.

ವಿಶ್ವದ ಬಡ ದೇಶಗಳಲ್ಲಿ ಒಂದಾಗಿರುವ ಮಾಲಿ, ಆಫ್ರಿಕಾದ ಪ್ರಮುಖ ಚಿನ್ನದ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಸಹೇಲ್ ಪ್ರದೇಶದಲ್ಲಿ ಚಿನ್ನದ ಗಣಿಗಾರಿಕೆ ತುಂಬಾ ಅಪಾಯಕಾರಿಯಾಗಿದೆ. ಇಲ್ಲಿ ವೃತ್ತಿಪರ ಕಾರ್ಮಿಕರಿಗಿಂತ ಕೂಲಿ ಕಾರ್ಮಿಕರೇ ಗಣಿಗಾರಿಕೆಯಲ್ಲಿ ತೊಡಗುತ್ತಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.