ಲಂಡನ್: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡುವ ದೇಶಗಳ ಹೆಸರುಗಳಿರುವ ‘ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿ’ಯಿಂದ ಪಾಕಿಸ್ತಾನದ ಹೆಸರನ್ನು ಬ್ರಿಟನ್ ಸರ್ಕಾರ ತೆಗೆದು ಹಾಕಿದೆ.

ಈ ವಿಷಯಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಸಂಸತ್ನಲ್ಲಿ ಸೋಮವಾರ ಮಂಡಿಸಲಾಗಿದೆ. ನಿಕರಾಗುವ ಹೆಸರನ್ನು ಕೂಡ ಈ ಪಟ್ಟಿಯಿಂದ ಕೈಬಿಡಲಾಗಿದೆ. ಇರಾನ್, ಮ್ಯಾನ್ಮಾರ್ ಹಾಗೂ ಸಿರಿಯಾ ಸೇರಿ 26 ದೇಶಗಳ ಹೆಸರುಗಳು ಈಗ ಈ ಪಟ್ಟಿಯಲ್ಲಿವೆ.

‘ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ಹರಿಯುವುದನ್ನು ತಡೆಗಟ್ಟಲು ಪಾಕಿಸ್ತಾನ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಖಜಾನೆ ಇಲಾಖೆಯ ಸಲಹಾ ಮಂಡಳಿಯು ತನ್ನ ಟಿಪ್ಪಣಿಯಲ್ಲಿ ಈ ಅಂಶವನ್ನು ಉಲ್ಲೇಖಿಸಿದೆ. ಹೀಗಾಗಿ ಪಟ್ಟಿಯಿಂದ ಪಾಕಿಸ್ತಾನದ ಹೆಸರನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ’ ಎಂದು ಮಸೂದೆಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.