ವಿಶ್ವಸಂಸ್ಥೆ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ನಡೆದ ಯತ್ನವನ್ನು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಅವರು ಬಲವಾಗಿ ಖಂಡಿಸಿದ್ದಾರೆ.

'ರಾಜಕೀಯ ಹಿಂಸಾಚಾರದ ಈ ಕೃತ್ಯವನ್ನು ಮಹಾ ಪ್ರಧಾನ ಕಾರ್ಯದರ್ಶಿ ಅವರು ಸ್ಪಷ್ಟವಾಗಿ ಖಂಡಿಸಿದ್ದಾರೆ. ಟ್ರಂಪ್ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ' ಎಂದು ಗುಟೆರಸ್ ಅವರ ವಕ್ತಾರರು ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಶನಿವಾರ ಗುಂಡಿನ ದಾಳಿ ನಡೆದಿದೆ. ಬಹಿರಂಗ ಸಮಾವೇಶದಲ್ಲಿ ಟ್ರಂಪ್ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಂದೂಕುಧಾರಿ ಗುಂಡು ಹಾರಿಸಿದ್ದಾನೆ. ಈ ವೇಳೆ ಪ್ರೇಕ್ಷಕನೊಬ್ಬ ಮೃತಪಟ್ಟಿದ್ದು, ಟ್ರಂಪ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ದಾಳಿ ನಡೆಸಿದ ಶಂಕಿತನನ್ನು ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಪತ್ತೆ ಮಾಡಿದೆ. 78 ವರ್ಷದ ಟ್ರಂಪ್ ಅವರು ಸದ್ಯ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಟ್ರಂಪ್ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಟ್ರಂಪ್, ಕಿವಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ, ಕೃತ್ಯದ ಬಗ್ಗೆ ವಿವರಿಸಿದ್ದಾರೆ.

ಘಟನೆ ಬೆನ್ನಲ್ಲೇ ಕಾರ್ಯಪ್ರವೃತರಾಗಿ ಹೆಚ್ಚಿನ ಹಾನಿ ತಪ್ಪಿಸಿದ ಭದ್ರತಾ ಸಿಬ್ಬಂದಿಗೆ ಧನ್ಯವಾದ ಹೇಳಿರುವ ಅವರು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇತರ ಗಾಯಾಳುಗಳ ಚೇತರಿಕೆಗೂ ಪ್ರಾರ್ಥಿಸಿದ್ದಾರೆ.
.ಪೆನ್ಸಿಲ್ವೇನಿಯಾದ ರ್ಯಾಲಿಯಲ್ಲಿ ಗುಂಡಿನ ದಾಳಿ: ಟ್ರಂಪ್ ಪ್ರಾಣಾಪಾಯದಿಂದ ಪಾರು.ಟ್ರಂಪ್ ಹತ್ಯೆಗೆ ಯತ್ನ: ಮೋದಿ, ರಾಹುಲ್ ಸೇರಿದಂತೆ ವಿಶ್ವ ನಾಯಕರು ಹೇಳಿದ್ದೇನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.