ವಾಷಿಂಗ್ಟನ್: ಭಾರತದ ಏಕತೆಯನ್ನು ಬೆಂಬಲಿಸಲು ಭಾರತ ಮೂಲದ ಅಮೆರಿಕನ್ನರು ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿ ಗುಂಪು ಸೇರಿದ್ದಾರೆ.

ರಾಯಭಾರ ಕಚೇರಿ ಎದುರು ನಾಗರಿಕರು ಭಾರತದ ಪರ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಟ್ವಿಟರ್ನಲ್ಲಿ ಹಂಚಿಕೊಂಡಿದೆ.

ಮಾರ್ಚ್ 22ರಂದು ಖಾಲಿಸ್ತಾನ ಪರ ಬೆಂಬಲಿಗರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಮೇಲೆ ದಾಳಿ ಮಾಡಿದ್ದರು. ಮತ್ತೆ ಪ್ರತಿಭಟನೆಗಳು ನಡೆಯಬಹುದು ಎಂಬ ವರದಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಕಚೇರಿಗೆ ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.

ಖಾಲಿಸ್ತಾನ ಪರ ಘೋಷಣೆ ಕೂಗುತ್ತಾ ಕಾನ್ಸುಲೇಟ್ ಕಚೇರಿಗೆ ನುಗ್ಗಿದ್ದ ಪ್ರತಿಭಟನಾಕಾರರು, ಕಚೇರಿ ಆವರಣದಲ್ಲಿ ‘ಖಾಲಿಸ್ತಾನ ಧ್ವಜ’ವನ್ನು ಹಾರಿಸಲು ಯತ್ನಿಸಿದ್ದರು. ನಂತರ ಕಬ್ಬಿಣದ ರಾಡು ಬಳಸಿ ಕಚೇರಿಯ ಬಾಗಿಲು ಮತ್ತು ಕಿಟಕಿಗಳನ್ನು ಒಡೆದಿದ್ದರು.

ಪಂಜಾಬಿ, ಹಿಂದಿಯಲ್ಲಿ ಖಾಲಿಸ್ತಾನ ಪರ ಘೋಷಣೆ ಕೂಗಿದ್ದ ಉದ್ರಿಕ್ತರು ಪಂಜಾಬ್ನಲ್ಲಿ ಪೊಲೀಸರು ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಘಟನೆಯು ಖಂಡಿತ ಸ್ವೀಕಾರಾರ್ಹ ಅಲ್ಲವೇ ಅಲ್ಲ. ರಾಜತಾಂತ್ರಿಕ ಅಧಿಕಾರಿಗಳು ಮತ್ತು ಅಲ್ಲಿನ ಸೌಕರ್ಯಗಳ ರಕ್ಷಣೆಗೆ ನಾವು ಬದ್ಧ ಎಂದು ಶ್ವೇತಭವನದ ಸಂವಹನ ಕಾರ್ಯತಂತ್ರದ ರಾಷ್ಟ್ರೀಯ ಭದ್ರತಾ ಮಂಡಳಿಯ ಸಮನ್ವಯಾಧಿಕಾರಿ ಜಾನ್ ಕಿರ್ಬಿ ಅವರು ತಿಳಿಸಿದ್ದರು.

ಹಿಂಸಾಚಾರ ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ ಸರ್ಕಾರವು ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕ ಅಮೃತ್ ಪಾಲ್ಸಿಂಗ್ ಬಂಧನಕ್ಕೆ ಕಾರ್ಯಾಚರಣೆ ಶುರುಮಾಡಿರುವುದೇ ಭಾರತದ ರಾಯಭಾರ ಕಚೇರಿ ಮೇಲೆ ದಾಳಿ ಮಾಡಲು ಕಾರಣ ಎನ್ನಲಾಗುತ್ತಿದೆ.

ಓದಿ...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ

ರಾಹುಲ್ ಅನರ್ಹತೆ: ಗಾಂಧಿ ತತ್ವಕ್ಕೆ ಎಸಗಿದ ದ್ರೋಹ ಎಂದ ಅಮೆರಿಕ ಕಾಂಗ್ರೆಸ್ ನಾಯಕರು

ಲಂಡನ್ | ಖಾಲಿಸ್ತಾನ ಪರ ಪ್ರತಿಭಟನೆ: ಹೈಕಮಿಷನ್ ಕಚೇರಿ ಮೇಲಿನ ದಾಳಿಗೆ ಖಂಡನೆ

ಖಾಲಿಸ್ತಾನ ಪರ ಪುಂಡಾಟ: ಅಮೆರಿಕದಲ್ಲಿ ಭಾರತ ರಾಯಭಾರ ಕಚೇರಿಗೆ ಭಾರಿ ಭದ್ರತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.