ವಾಷಿಂಗ್ಟನ್: ಕಳೆದ ತಿಂಗಳ ಅಂತ್ಯದವರೆಗೆ ಅಫ್ಗಾನಿಸ್ತಾನದಿಂದ ಅಂದಾಜು ಶೇ 30ರಿಂದ 44ರಷ್ಟು ಅಮರಿಕನ್ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸೆಪ್ಟೆಂಬರ್ 11ರೊಳಗೆ ಅಮೆರಿಕ ಎಲ್ಲ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವುದಾಗಿ ಏಪ್ರಿಲ್ನಲ್ಲಿ ಘೋಷಿಸಿದ್ದರು. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಅಮೆರಿಕ ಸೈನ್ಯವನ್ನು ವಾಪಸ್ ಕರೆಸಿಕೊಳ್ಳುತ್ತಿದೆ.

ಯುದ್ಧ ಪೀಡಿತ ಅಫ್ಗಾನಿಸ್ತಾನದಲ್ಲಿ ಅಮೆರಿಕದ ಸೇನಾ ಪಡೆಗಳು ಎರಡು ದಶಕಗಳಿಂದ ಕಾರ್ಯ ನಿರ್ವಹಿಸುತ್ತಿವೆ.
ಅಧ್ಯಕ್ಷ ಬೈಡನ್ ಘೋಷಣೆ ಬಳಿಕ, ರಕ್ಷಣಾ ಇಲಾಖೆಯು ಅಫ್ಗಾನಿಸ್ತಾನದಿಂದ ಸುಮಾರು 300 ಸಿ -17 ಲೋಡ್ ಸಾಮಗ್ರಿಗಳನ್ನು ಹಿಂದಕ್ಕೆ ಕಳುಹಿಸಿದೆ. ಹಾಗೆಯೇ ಸುಮಾರು 13,000 ಉಪಕರಣಗಳನ್ನು ರಕ್ಷಣಾ ಲಾಜಿಸ್ಟಿಕ್ಸ್ ಏಜೆನ್ಸಿ ಮೂಲಕ ಹಿಂದಕ್ಕೆ ಕಳುಹಿಸಲಾಗಿದೆ ಎಂದು ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಅಫ್ಗಾನಿಸ್ತಾನದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಬೇಕು ಎಂಬ ಉದ್ದೇಶದಿಂದ 2020ರ ಫೆಬ್ರುವರಿ 29ರಂದು ದೋಹಾದಲ್ಲಿ ಅಮೆರಿಕ ಮತ್ತು ತಾಲಿಬಾನ್ ನಡುವೆ ಒಪ್ಪಂದ ಏರ್ಪಟ್ಟಿತ್ತು. ಇದರ ಭಾಗವಾಗಿ ಅಮೆರಿಕ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದೆ. ಈ ಒಪ್ಪಂದದ ಪ್ರಕಾರ ಅಮೆರಿಕ ತನ್ನ ಎಲ್ಲ ಸೈನಿಕರನ್ನು 14 ತಿಂಗಳಲ್ಲಿ ಹಿಂದಕ್ಕೆ ಕರೆಸಿಕೊಳ್ಳಬೇಕು.

ಪ್ರಸ್ತುತ ಅಫ್ಗಾನಿಸ್ತಾನದಲ್ಲಿ ಅಮೆರಿಕದ 2,500 ಸೈನಿಕರು ಇದ್ದಾರೆ. 2001ರಿಂದೀಚೆಗೆ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಸಂಖ್ಯೆಯ ಅಮೆರಿಕನ್ ಸೈನಿಕರು ಅಲ್ಲಿದ್ದಾರೆ.

ಅಫ್ಗಾನಿಸ್ತಾನದಲ್ಲಿನ ತಾಲಿಬಾನ್ ಹೋರಾಟ ಪಾಕಿಸ್ತಾನದ ಪರೋಕ್ಷ ಯುದ್ಧ:ಮೊಹಿಬ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.