ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ದೇಶಗಳು ಪ್ರಜಾಪ್ರಭುತ್ವ ಸಂಪ್ರದಾಯ ಮತ್ತು ನಿಕಟ ಸ್ನೇಹ ಸಂಬಂಧಗಳನ್ನು ಹೊಂದಿವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರು ಶನಿವಾರ ಹೇಳಿದರು.

74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತೀಯರಿಗೆ ಶುಭಕೋರಿದ ಅವರು, ‘ಭಾರತ ಸ್ವಾತಂತ್ರ್ಯಪಡೆದ ದಿನದಿಂದಲೂ ಅಮೆರಿಕದ ಜತೆ ಸ್ನೇಹ ಹೊಂದಿದೆ.ಈ ಸಂಬಂಧವು ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವಾಗಿ ಬೆಳೆದಿದೆ. ಉಭಯ ರಾಷ್ಟ್ರಗಳು 21ನೇ ಶತಮಾನದಲ್ಲಿ ಜಾಗತಿಕ ಭದ್ರತೆ ಮತ್ತು ಸಮೃದ್ಧಿಗೆ ಪ್ರಮುಖವಾದ ವಿಷಯಗಳ ಬಗ್ಗೆ ಜಂಟಿಯಾಗಿ ಶ್ರಮಿಸಲಿವೆ’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

‘ಭಯೋತ್ಪಾದನೆ ವಿರುದ್ಧದ ಹೋರಾಟ, ರಕ್ಷಣಾ ವ್ಯವಸ್ಥೆ, ವ್ಯಾಪಾರ, ಹೂಡಿಕೆ, ಇಂಧನ, ಪರಿಸರ, ಆರೋಗ್ಯ, ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ ಕ್ಷೇತ್ರಗಳಲ್ಲಿ ಅಭಿವೃದ್ಧಿಗಾಗಿಭಾರತ ಮತ್ತು ಅಮೆರಿಕ ದೇಶಗಳುಜೊತೆಯಾಗಿ ಕೆಲಸ ಮಾಡುತ್ತಿವೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.