ಫಿಲಡೆಲ್ಫಿಯಾ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ಫ್ಲೋರಿಡಾ, ಇಂಡಿಯಾನಾ, ಕೆಂಟುಕಿ ಸೇರಿದಂತೆ 9 ರಾಜ್ಯಗಳಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಇತ್ತ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ನ್ಯೂಯಾರ್ಕ್, ವರ್ಮೊಂಟ್ ಸೇರಿದಂತೆ 5 ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಿರ್ಣಾಯಕ ಏಳು ರಾಜ್ಯಗಳಾದ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್, ನೆವಾಡ, ಅರಿಜೋನಾ, ಜಾರ್ಜಿಯಾ ಮತ್ತು ಉತ್ತರ ಕೆರೊಲಿನಾ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಈ ಪೈಕಿ ಜಾರ್ಜಿಯಾ ಸೇರಿದಂತೆ ಆರು ರಾಜ್ಯಗಳಲ್ಲಿ ಮತದಾನ ಮುಕ್ತಾಯವಾಗಿದೆ. ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಇನ್ನಷ್ಟೆ ಹೊರಬೀಳಲಿದೆ.

ನ್ಯೂಜೆರ್ಸಿ, ಮೇರಿಲ್ಯಾಂಡ್, ಕನೆಕ್ಟಿಕಟ್, ಮ್ಯಾಸಚೂಸೆಟ್ಸ್, ರೋಡ್ ಐಲ್ಯಾಂಡ್ನಲ್ಲಿ ಹ್ಯಾರಿಸ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಇತ್ತ ಪಶ್ಚಿಮ ವರ್ಜೀನಿಯಾದಲ್ಲಿ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನ್ಯೂ ಹ್ಯಾಂಪ್ಶೈರ್ನಲ್ಲಿ ಟ್ರಂಪ್ ಮತ್ತು ಹ್ಯಾರಿಸ್ ತಲಾ ಮೂರು ಮತಗಳನ್ನು ಪಡೆದಿದ್ದಾರೆ. ವರ್ಮೊಂಟ್ನಲ್ಲಿ ನಡೆದ ಮರುಚುನಾವಣೆಯಲ್ಲಿ ಸೆನೆಟರ್ ಬರ್ನಿ ಸ್ಯಾಂಡರ್ಸ್ ಗೆಲುವು ಸಾಧಿಸಿದ್ದಾರೆ.
.ಅಮೆರಿಕ ಅಧ್ಯಕ್ಷೀಯ ಚುನಾವಣೆ: ತುರುಸಿನ ಮತದಾನ.ಸೀಮೋಲ್ಲಂಘನ | ಶ್ವೇತಭವನ: ಯಾರು ಗೆದ್ದರೆ ಏನು ಲಾಭ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.