ಕ್ಯಾನ್‌ಬೆರಾ: ‘ಚೀನಾದೊಂದಿಗೆ ಮುಖಾಮುಖಿ ಆಗುವುದು ಅನಿವಾರ್ಯವಲ್ಲ. ಆದರೆ ಚೀನಾದ ಆಕ್ರಮಣಕಾರಿ ನೀತಿಗಳ ಬೆದರಿಕೆಯನ್ನು ಸಮರ್ಪಕವಾಗಿ ಎದುರಿಸಲು ಅಮೆರಿಕ ತನ್ನ ಮಿತ್ರರಾಷ್ಟ್ರಗಳೊಂದಿಗೆ ನಿಲ್ಲುತ್ತದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟೊನಿ ಬ್ಲಿಂಕೆನ್ ಶುಕ್ರವಾರ ಹೇಳಿದ್ದಾರೆ.

ಇಂಡೊ–ಪೆಸಿಫಿಕ್ ವಲಯದ ಪ್ರಜಾಪ್ರಭುತ್ವ ದೇಶಗಳ ಗುಂಪಾದ ‘ಕ್ವಾಡ್’ನ ಸದಸ್ಯ ರಾಷ್ಟ್ರಗಳಾದ ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗಿನ ಸಭೆಗೂ ಮುನ್ನ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಫ್ರಾನ್ಸ್ನಿಂದ 42 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಲಿದೆ ಇಂಡೊನೇಷ್ಯಾ

ಇಂಡೊ- ಪೆಸಿಫಿಕ್ ವಲಯದಲ್ಲಿ ಚೀನಾದೊಂದಿಗಿನ ಮುಖಾಮುಖಿ ಅನಿವಾರ್ಯವೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಏನೂ ಅನಿವಾರ್ಯವಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಚೀನಾ ತನ್ನ ದೇಶ ಮತ್ತು ಈ ವಲಯದಲ್ಲಿ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ ಎಂಬುದು ಕಳವಳಕಾರಿ. ಈ ಕುರಿತು ನಾವು ನಮ್ಮ ಭಾವನೆಗಳನ್ನು ಹಂಚಿಕೊಳ್ಳುತ್ತೇವೆ’ ಎಂದರು.

ಅಮೆರಿಕವು ತನ್ನ ಪ್ರಜಾಪ್ರಭುತ್ವದ ಮಾನದಂಡಗಳನ್ನು ಹೇರಲು ‘ಕ್ವಾಡ್’ ಬಲವನ್ನು ಬಳಸಿಕೊಳ್ಳುತ್ತಿದೆ ಎಂದುಚೀನಾದ ವಿದೇಶಾಂಗ ಸಚಿವಾಲಯ ಇತ್ತೀಚಿಗೆ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.