ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್‌‌ನಿಂದ ಟ್ರಂಪ್ ಹತ್ಯೆಗೆ ನಿಜವಾದ ಬೆದರಿಕೆ: ಅಮೆರಿಕ ಗುಪ್ತಚರ ಎಚ್ಚರಿಕೆ

Published : 25 ಸೆಪ್ಟೆಂಬರ್ 2024, 5:45 IST
Last Updated : 25 ಸೆಪ್ಟೆಂಬರ್ 2024, 5:45 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾನ್‌ನಿಂದ ನಿಜವಾದ ಬೆದರಿಕೆ ಇದೆ ಎಂದು ಅಮೆರಿಕ ಗುಪ್ತಚರ ದಳದ ಮಾಹಿತಿ ಆಧರಿಸಿ ಟ್ರಂಪ್ ಪರ ಚುನಾವಣಾ ಅಭಿಯಾನದ ಸಂಘಟಕರು ತಿಳಿಸಿದ್ದಾರೆ.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಇರಾನ್‌ನಿಂದ ಟ್ರಂಪ್‌ಗೆ ಬೆದರಿಕೆ ಇದೆ ಎಂದು ಅಮೆರಿಕ ಗುಪ್ತಚರ ಎಚ್ಚರಿಸಿರುವುದಾಗಿ ಟ್ರಂಪ್ ಅವರ ಪ್ರಚಾರ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ 78 ವರ್ಷದ ಟ್ರಂಪ್ ಅವರನ್ನು ಈಗಾಗಲೇ ಎರಡು ಬಾರಿ ಹತ್ಯೆ ಮಾಡುವ ಯತ್ನ ನಡೆದಿದೆ.

ಗುಪ್ತಚರ ಅಧಿಕಾರಿಗಳು ಹಾಗೂ ಕಾನೂನು ಜಾರಿ ಅಧಿಕಾರಿಗಳು ಟ್ರಂಪ್ ವಿರುದ್ಧದ ಸಂಘಟಿತ ದಾಳಿಗಳನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಮಾಜಿ ಅಧ್ಯಕ್ಷರ ರಕ್ಷಣೆ ಹಾಗೂ ಸಂಪೂರ್ಣ ಭದ್ರತೆ ಒದಗಿಸುವುದನ್ನು ಖಚಿತಪಡಿಸಿಕೊಂಡಿದೆ.

ಜುಲೈ 13ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ ಎಂಬಲ್ಲಿ ಚುನಾವಣಾ ಪ್ರಚಾರದ ವೇಳೆ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಮೊದಲ ಬಾರಿ ಗುಂಡಿಕ್ಕಿ ಹತ್ಯೆಗೈಯಲು ಯತ್ನ ನಡೆದಿತ್ತು. ಟ್ರಂಪ್ ಅವರ ಕಿವಿಗೆ ಗಾಯವಾಗಿತ್ತು. ಸೆಪ್ಟೆಂಬರ್ 15ರಂದು ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಇಂಟರ್‌ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಎರಡನೇ ಸಲ ಹತ್ಯೆಗೈಯುವ ಯತ್ನ ನಡೆದಿತ್ತು.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನವೆಂಬರ್ 5ರಂದು ನಡೆಯಲಿದೆ. ಟ್ರಂಪ್ ಮತ್ತು ಅಮೆರಿಕದ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT