ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್‌ ಮೂಲದಿಂದ ಡೊನಾಲ್ಡ್ ಟ್ರಂಪ್‌ಗೆ ಜೀವ ಬೆದರಿಕೆ ಇತ್ತು: ವರದಿ

Published : 17 ಜುಲೈ 2024, 2:29 IST
Last Updated : 17 ಜುಲೈ 2024, 2:29 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇರಾನ್‌ ಮೂಲದಿಂದ ಜೀವ ಬೆದರಿಕೆ ಎದುರಾಗಿತ್ತು. ಈ ಕುರಿತು ಗುಪ್ತಚರ ಮಾಹಿತಿ ಲಭಿಸಿತ್ತು. ಇದರಿಂದಾಗಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು ಎಂದು ವರದಿಯಾಗಿದೆ.

ಆದರೆ ಪೆನ್ಸಿಲ್ವೇನಿಯಾದ ಚುನಾವಣಾ ಸಮಾವೇಶದಲ್ಲಿ ಟ್ರಂಪ್ ಮೇಲೆ ನಡೆದಿದ್ದ ಗುಂಡಿನ ದಾಳಿಗೂ ಮತ್ತು ಇರಾನ್ ಮೂಲದ ಬೆದರಿಕೆಗೆ ಯಾವುದೇ ಸಂಬಂಧವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

'ಇರಾನ್ ಮೂಲದ ಬೆದರಿಕೆಯನ್ನು ಪತ್ತೆ ಹಚ್ಚಲು ಪ್ರಯತ್ನ ಮುಂದುವರಿದಿದೆ' ಎಂದು ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್ ವಕ್ತಾರ ಆಡ್ರಿಯೆನ್ ವ್ಯಾಟ್ಸನ್ ತಿಳಿಸಿದ್ದಾರೆ.

2020ರಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಕ್ಯುಡ್ಸ್ ಫೋರ್ಸ್‌ನ ನೇತೃತ್ವ ವಹಿಸಿದ್ದ ಖಾಸೆಮ್ ಸುಲೈಮಾನ್‌ರನ್ನು ಕೊಲ್ಲಲು ಡೊನಾಲ್ಡ್ ಟ್ರಂಪ್ ಆದೇಶಿಸಿದ್ದರು. ಸುಲೈಮಾನ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಬೆದರಿಕೆ ಒಡ್ಡಲಾಗಿತ್ತು.

'ಇದು ದೇಶದ ಭದ್ರತೆಗೆ ಸಂಬಂಧಪಟ್ಟ ವಿಷಯವಾಗಿದ್ದು, ಗಂಭೀರವಾಗಿ ಪರಿಗಣಿಸುತ್ತೇವೆ' ಎಂದು ವ್ಯಾಟ್ಸನ್ ಹೇಳಿದ್ದಾರೆ.

ಬೆದರಿಕೆ ಕುರಿತು ಟ್ರಂಪ್ ಅವರಿಗೆ ಅಮೆರಿಕದ ಸೀಕ್ರೆಟ್ ಸರ್ವಿಸ್ ಮಾಹಿತಿ ನೀಡಿತ್ತು ಎನ್ನಲಾಗಿದೆ. ಶನಿವಾರದ ಚುನಾವಣಾ ಸಮಾವೇಶದ ವೇಳೆ 20 ವರ್ಷದ ಥಾಮಸ್‌ ಮ್ಯಾಥ್ಯೂ ಕ್ರೂಕ್ಸ್‌ ಎಂಬ ಯುವಕ ಟ್ರಂಪ್ ಹತ್ಯೆಗೆ ಯತ್ನಿಸಿದ್ದನು. ಆತನನ್ನು ಸ್ಥಳದಲ್ಲೇ ಅಮೆರಿಕದ ಸೀಕ್ರೆಟ್ ಸರ್ವಿಸ್‌ನ ಸಿಬ್ಬಂದಿ ಗುಂಡಿಕ್ಕಿ ಹತ್ಯಗೈದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT