ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ದ ವಿರೋಧ ಪಕ್ಷ ಡೆಮಾಕ್ರಟಿಕ್ ಪಾರ್ಟಿ ಮಂಡಿಸಿದ್ದ ವಾಗ್ದಂಡನೆ ನಿರ್ಣಯಕ್ಕೆ ಸೋಲಾಗಿದೆ.

ಅಧಿಕಾರ ದುರುಪಯೋಗ ಮತ್ತು ಸಂಸತ್ ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಡೆಮಾಕ್ರಟಿಕ್ ಪಕ್ಷ ಡೋನಾಲ್ಡ್ ಟ್ರಂಪ್ ವಿರುದ್ಧ ವಾಗ್ದಂಡನೆ ಮಂಡಿಸಲಾಗಿತ್ತು. ವಾಗ್ದಂಡನೆ ಕುರಿತ ವಾದ - ಪ್ರತಿವಾದಗಳನ್ನು ಆಲಿಸಿದ ನಂತರ ಸೆನೆಟ್ ಟ್ರಂಪ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ.

ಶುಕ್ರವಾರ ನಡೆದ ಸಭೆಯಲ್ಲೇ ಟ್ರಂಪ್ ವಿರುದ್ಧ ಹೊಸದಾಗಿ ಸಾಕ್ಷ್ಯಗಳನ್ನು ಮತ್ತು ದಾಖಲೆಗಳನ್ನು ಪರಿಗಣಿಸಬೇಕು ಎಂಬ ವಿರೋಧ ಪಕ್ಷದ ಸೂಚನೆಯನ್ನು ಸೆನೆಟ್ ತಿರಸ್ಕರಿಸಿತ್ತು. ಹೊಸ ಸಾಕ್ಷ್ಯಗಳನ್ನು ಪರಿಗಣಿಸಬೇಕು ಎಂಬ ನಿರ್ಣಯದ ವಿರುದ್ಧವಾಗಿ 51 ಹಾಗೂ ಪರವಾಗಿ 49 ಮತಗಳು ಚಲಾವಣೆಗೊಂಡಿದ್ದವು.

ಟ್ರಂಪ್ ಅವರ ಕಾನೂನು ತಂಡವು ಅಧ್ಯಕ್ಷಕರು ಯಾವುದೇ ತಪ್ಪನ್ನೂ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದು, ವಾಗ್ದಂಡನೆಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದರು.

100 ಸದಸ್ಯ ಬಲದ ಸೆನೆಟ್‌ನಲ್ಲಿ ಟ್ರಂಪ್ ಪರ 52 ಹಾಗೂ ವಿರುದ್ಧ 48 ಮತಗಳು ಲಭಿಸಿದ್ದು, ವಾಗ್ದಂಡನೆಯಿಂದ ಪಾರಾಗಿದ್ದಾರೆ. ಈ ಮೂಲಕ ಅಮೆರಿಕದ ಇತಿಹಾಸದಲ್ಲಿಯೇ ವಾಗ್ದಂಡನೆಯಿಂದ ಪಾರಾದ 3ನೇ ಅಧ್ಯಕ್ಷ ಎನಿಸಿಕೊಂಡಿದ್ದಾರೆ.

435 ಸದಸ್ಯರಿರುವ ಜನಪ್ರತಿನಿಧಿಗಳ ಸಭೆಯಲ್ಲಿ ಡೆಮಾಕ್ರಟಿಕ್ ಪಕ್ಷವು ಬಹುಮತ ಹೊಂದಿದ್ದು, ನಿರ್ಣಯದ ಪರವಾಗಿ 228, ವಿರುದ್ಧವಾಗಿ 193 ಮತಗಳು ಚಲಾವಣೆಗೊಂಡಿತ್ತು. ಅಲ್ಲಿ ಟ್ರಂಪ್‌ಗೆ ಸೋಲುಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.