ವಾಷಿಂಗ್ಟನ್: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಪಾಲ್ಗೊಳ್ಳಲಿದ್ದಾರೆ. ಟೋಕಿಯೊದಲ್ಲಿ ಸೆಪ್ಟೆಂಬರ್ 27ರಂದು ಅಂತ್ಯಸಂಸ್ಕಾರ ನೆರವೇರಲಿದೆ.

ದೀರ್ಘಾವಧಿ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ 67 ವರ್ಷದ ಶಿಂಜೊ ಅಬೆ ಅವರನ್ನು ಜುಲೈ 8ರಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಪರವಾಗಿ ಕಮಲಾ ಹ್ಯಾರಿಸ್ ಟೋಕಿಯೊಗೆ ಭೇಟಿ ನೀಡಲಿದ್ದಾರೆ. ಬಳಿಕ ದಕ್ಷಿಣ ಕೊರಿಯಾದ ನಾಯಕರ ಜೊತೆ ಮಾತುಕತೆ ನಡೆಸಲು ಸಿಯೋಲ್ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧಿಕೃತ ವಕ್ತಾರರು ಮಾಹಿತಿ ನೀಡಿದ್ದಾರೆ.

ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಭೇಟಿ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.