ವಾಷಿಂಗ್ಟನ್: ‘ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ವಿಶ್ವದ ನೂರಾರು ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಅಧ್ಯಕ್ಷ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಮಾತುಕತೆಗೂ ಮುನ್ನ ಶ್ವೇತಭವನದಲ್ಲಿ ಉಭಯ ನಾಯಕರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮೋದಿ ಅವರು ಈ ಮೆಚ್ಚುಗೆಯ ಮಾತುಗಳನ್ನಾಡಿದರು.

‘ನೀವು ಅಮೆರಿಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು ಐತಿಹಾಸಿಕ ಹಾಗೂ ಮಹತ್ವದ ಕ್ಷಣ. ವಿಶ್ವದ ಅನೇಕರಿಗೆ ನೀವು ಪ್ರೇರಣೆಯಾಗಿದ್ದೀರಿ’ ಎಂದು ಕಮಲಾ ಹ್ಯಾರಿಸ್ ಅವರನ್ನು ಉದ್ದೇಶಿಸಿ ಮೋದಿ ಹೇಳಿದರು.

ಭಾರತಕ್ಕೆ ಭೇಟಿ ನೀಡುವಂತೆ ಕಮಲಾ ಹ್ಯಾರಿಸ್ ಹಾಗೂ ಪತಿ ಡಗ್ಲಾಸ್ ಎಮ್‌ಹಾಫ್ ಅವರಿಗೆ ಇದೇ ಸಂದರ್ಭದಲ್ಲಿ ಮೋದಿ ಅವರು ಆಹ್ವಾನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.