ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಹಿಂಸೆಗೆ ಅವಕಾಶವಿಲ್ಲ ಎಂದ ಹ್ಯಾರಿಸ್

Published : 14 ಜುಲೈ 2024, 2:29 IST
Last Updated : 14 ಜುಲೈ 2024, 2:29 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಖಂಡಿಸಿದ್ದಾರೆ.

'ಇಂತಹ ಹಿಂಸಾಚಾರಕ್ಕೆ ನಮ್ಮ ದೇಶದಲ್ಲಿ ಯಾವುದೇ ಅವಕಾಶವಿಲ್ಲ. ನಾವೆಲ್ಲರೂ ಈ ಹೇಯ ಕೃತ್ಯವನ್ನು ಖಂಡಿಸುತ್ತೇವೆ. ಅಲ್ಲದೆ ಈ ಘಟನೆಯು ಮತ್ತಷ್ಟು ಹಿಂಸಾಚಾರಕ್ಕೆ ಕಾರಣವಾಗದಂತೆ ಎಚ್ಚರ ವಹಿಸಬೇಕು' ಎಂದು ಹೇಳಿದ್ದಾರೆ.

'ಪೆನ್ಸಿಲ್ವೇನಿಯಾದಲ್ಲಿ ಮಾಜಿ ಅಧ್ಯಕ್ಷ ಟ್ರಂಪ್ ಅವರ ಮೇಲಿನ ದಾಳಿಯ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಅವರಿಗೆ ಗಂಭೀರ ಗಾಯವಾಗಿಲ್ಲ. ಟ್ರಂಪ್ ಹಾಗೂ ಅವರ ಕುಟುಂಬ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

ತಕ್ಷಣ ಕ್ರಮ ಕೈಗೊಂಡಿರುವ ಅಮೆರಿಕದ ಸೀಕ್ರೆಟ್ ಸರ್ವಿಸ್, ಸ್ಥಳೀಯ ಅಧಿಕಾರಿಗಳಿಗೆ ಕೃತಜ್ಞರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಅವರು ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

ಘಟನೆಯಲ್ಲಿ 78 ವರ್ಷದ ಡೊನಾಲ್ಡ್‌ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT