ಬೆಳವಣಿಗೆಗಳ ಮೇಲೆ ನಿಗಾ: ಅಮೆರಿಕ
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿ ವಕ್ತಾರ ಆ್ಯಡಮ್ ಹಾಜ್,‘ರಷ್ಯಾ ಮತ್ತು ಉಕ್ರೇನ್‌ನಲ್ಲಿ ಉದ್ಭವಿಸಿರುವ ಈ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದೇವೆ. ಈ ಬೆಳವಣಿಗೆಗಳ ಬಗ್ಗೆ ನಮ್ಮ ಮಿತ್ರ ರಾಷ್ಟ್ರಗಳೊಂದಿಗೆ ಸಮಾಲೋಚನೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದಿದ್ದಾರೆ. ‘ಪುಟಿನ್ ನಿಷ್ಠರಾದ ಶೋಯಿಗು ಹಾಗೂ ಗೆರಾಸಿಮೋವ್ ಅವರನ್ನು ಹಿಂಸಾರೂಪದ ದಂಗೆಯ ಮೂಲಕ ಅಧಿಕಾರದಿಂದ ಕೆಳಗಿಳಿಸಿದ್ದೇ ಆದಲ್ಲಿ, ಪುಟಿನ್ ಅವರಿಗೆ ಭಾರಿ ಹಿನ್ನಡೆಯಾಗಲಿದೆ. ಅವರು ಹೊಂದಿರಬಹುದಾದ ಹಿಡಿತವನ್ನು ಕಳೆದುಕೊಳ್ಳಲಿದ್ದಾರೆ’ ಎಂದು ವಾಷಿಂಗ್ಟನ್‌ನಲ್ಲಿರುವ ಇನ್ಸ್‌ಟಿಟ್ಯೂಟ್ ಫಾರ್ ದಿ ಸ್ಟಡಿ ಆಫ್ ವಾರ್ ಹೇಳಿದೆ.