ಜಿನಿವಾ: ವಿಶ್ವದಾದ್ಯಂತ ಸುಮಾರು 20 ಕೋಟಿ ಜನರು ಕೋವಿಡ್ -19 ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ, ಆದರೆ, ದೀರ್ಘ ಕೋವಿಡ್(Long Covid)ನಿಂದ ಬಳಲುತ್ತಿರುವ ಲೆಕ್ಕಕ್ಕೆ ಸಿಗದ ಸಂಖ್ಯೆಗಳ ಬಗ್ಗೆ ಹೆಚ್ಚು ಕಳವಳಗೊಂಡಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಕೋವಿಡ್‌ನಿಂದ ಗುಣಮುಖರಾದ ನಂತರವೂ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವಜನರ ಬಗ್ಗೆ ಡಬ್ಲ್ಯೂಎಚ್‌ಒ ಗಮನ ಹರಿಸಿದೆ.

ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕವೂ ಅದರ ಪರಿಣಾಮ ಎದುರಿಸುತ್ತಿರುವ ಜನರು ವೈದ್ಯಕೀಯ ಸಹಾಯ ಪಡೆಯುವಂತೆ ವಿಶ್ವ ಆರೋಗ್ಯ ಸಂಸ್ಥೆ ಕೋರಿದೆ.

ದೀರ್ಘ ಕೋವಿಡ್ ಸಾಂಕ್ರಾಮಿಕ ರೋಗದ ಅತ್ಯಂತ ನಿಗೂಢ ಅಂಶಗಳಲ್ಲಿ ಒಂದಾಗಿದೆ ಎಂದು ಅದು ಹೇಳಿದೆ.

‘ಈ ಕೋವಿಡ್ ನಂತರದ ಸಿಂಡ್ರೋಮ್ ಅಥವಾ ಲಾಂಗ್ ಕೋವಿಡ್ ಬಗ್ಗೆ ಡಬ್ಲ್ಯುಎಚ್‌ಒ ತೀವ್ರವಾಗಿ ಚಿಂತಿಸುತ್ತಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್ -19 ಟೆಕ್ನಿಕಲ್ ಲೀಡ್ ಮಾರಿಯಾ ವ್ಯಾನ್ ಕೆರ್ಖೋವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಕೋವಿಡ್ -19 ರೋಗವನ್ನು ಉಂಟುಮಾಡುವ ಸಾರ್ಸ್-ಕೋವ್-2 ಸೋಂಕಿಗೆ ಒಳಗಾದವರಲ್ಲಿ ‘ಅನೇಕರು ದೀರ್ಘಕಾಲೀನ ಪರಿಣಾಮಗಳಿಂದ ಬಳಲುತ್ತಿದ್ದಾರೆ’ಎಂಬುದು ನಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.

‘ಈ ಪರಿಣಾಮಗಳು ಎಷ್ಟು ಕಾಲ ಉಳಿಯುತ್ತವೆ ಎಂದು ನಮಗೆ ತಿಳಿದಿಲ್ಲ. ಈ ಕೋವಿಡ್ ನಂತರದ ಸಿಂಡ್ರೋಮ್ ಏನೆಂಬುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ವಿವರಿಸಲು ನಾವು ಇದರ ಮೇಲೆ ಅಧ್ಯಯನ ಮಾಡುತ್ತಿದ್ದೇವೆ’ಎಂದು ವ್ಯಾನ್ ಕೆರ್ಖೋವ್ ಹೇಳಿದರು.

ದೀರ್ಘ ಕೋವಿಡ್ ಪೀಡಿತರಿಗೆ ಉತ್ತಮ ಪುನರ್ವಸತಿ ಕಾರ್ಯಕ್ರಮಗಳನ್ನು ಒದಗಿಸಲು ವಿಶ್ವ ಆರೋಗ್ಯ ಸಂಸ್ಥೆ ಕೆಲಸ ಮಾಡುತ್ತಿದೆ. ಸಿಂಡ್ರೋಮ್ ಎಂದರೇನು ಮತ್ತು ಅದನ್ನು ಹೇಗೆ ನಿರ್ವಹಿಸಬಹುದು ಎಂಬುದರ ಕುರಿತು ಉತ್ತಮ ತಿಳುವಳಿಕೆಯನ್ನು ಪಡೆಯಲು ವಿಶಾಲ ಸಂಶೋಧನೆ ನಡೆಸುತ್ತಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.