ಕೀವ್: ಅಮೆರಿಕ ನೇತೃತ್ವದ ನ್ಯಾಟೊ ಮಿಲಿಟರಿ ಮೈತ್ರಿಕೂಟದ ಸದಸ್ಯನಾಗುವುದಿಲ್ಲ ಎಂಬುದನ್ನು ನಮ್ಮ ದೇಶ ಒಪ್ಪಿಕೊಳ್ಳಬೇಕು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಂಗಳವಾರ ಹೇಳಿದ್ದಾರೆ.

ಉಕ್ರೇನ್ ಮೇಲೆ ತಾನು ನಡೆಸುತ್ತಿರುವ ಆಕ್ರಮಣವನ್ನು ಸಮರ್ಥಿಸಿಕೊಳ್ಳಲು ರಷ್ಯಾಗೆ ಇದುವೇ ಪ್ರಮುಖ ಕಾರಣವಾಗಿದೆ.

ಉಕ್ರೇನ್, ನ್ಯಾಟೊದ ಸದಸ್ಯ ರಾಷ್ಟ್ರವಲ್ಲ. ನಾವು ಇದನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೊ ಸದಸ್ಯತ್ವ ಪಡೆಯಲು ಮುಕ್ತ ಅವಕಾಶವಿದೆ ಎಂಬುದನ್ನು ನಾವು ವರ್ಷಗಳಿಂದಲೇ ಕೇಳಿದ್ದೇವೆ. ಆದರೆ, ಈಗ ನಾವು ಸೇರಲು ಸಾಧ್ಯವಿಲ್ಲ ಎಂಬುದನ್ನು ಅರಿತುಕೊಂಡಿದ್ದೇವೆ. ಇದುವೇ ಸತ್ಯವಾಗಿದ್ದು, ಇದನ್ನು ಪರಿಗಣಿಸಬೇಕು' ಎಂದು ಮಿಲಿಟರಿ ಅಧಿಕಾರಿಗಳೊಂದಿಗಿನ ವಿಡಿಯೊ ಕಾನ್ಫರೆನ್ಸ್ನಲ್ಲಿ ಝೆಲೆನ್ಸ್ಕಿ ತಿಳಿಸಿದ್ದಾರೆ.

ಫೆ.24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಅಂದಿನಿಂದ ರಷ್ಯಾ ಪಡೆಗಳು ಉಕ್ರೇನ್ ಮೇಲೆ ಆಕ್ರಮಣವನ್ನು ಮುಂದುವರಿಸಿದ್ದು, ಯೋಧರು, ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಷ್ಯಾದ ಈ ನಿಲುವನ್ನು ವಿರೋಧಿಸಿರುವ ವಿಶ್ವ ಸಮುದಾಯ ಈಗಾಗಲೇ ರಷ್ಯಾ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿವೆ. ಈಗಾಗಲೇ, ರಷ್ಯಾದಿಂದ ತೈಲ ಮತ್ತು ಇತರ ಇಂಧನ ಆಮದಿನ ಮೇಲೆ ಅಮೆರಿಕ ನಿಷೇಧ ಹೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.