ರಾಜ್ಯದಲ್ಲಿ 1.47 ಕೋಟಿ ಕುಟುಂಬಗಳು ಆದ್ಯತಾ ವಲಯದ (ಬಡತನ ರೇಖೆಗಿಂತ ಕೆಳಗಿರುವ- ಬಿಪಿಎಲ್) ಕುಟುಂಬಗಳ ಪಡಿತರ ಚೀಟಿ ಹೊಂದಿದ್ದು, 4.67 ಕೋಟಿ ಜನ ಈ ವ್ಯಾಪ್ತಿಯಲ್ಲಿದ್ದಾರೆ. ರಾಜ್ಯದ ಶೇಕಡ 80ರಷ್ಟು ಜನ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಾರೆ. ಆದರೆ, ನೀತಿ ಆಯೋಗದ ಇತ್ತೀಚಿನ ವರದಿ ಪ್ರಕಾರ, ರಾಜ್ಯದಲ್ಲಿ ಬಡತನದ ಪ್ರಮಾಣ ಅತ್ಯಂತ ವೇಗವಾಗಿ ತಗ್ಗುತ್ತಿದೆ. ಸದ್ಯ ರಾಜ್ಯದಲ್ಲಿ
ಶೇ 5.67ರಷ್ಟು ಜನ ಮಾತ್ರ ಬಡವರಾಗಿದ್ದಾರೆ. ನೀತಿ ಆಯೋಗದ ಅಂದಾಜಿಗೆ ವಿರುದ್ಧವಾಗಿ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದುತ್ತಿರುವ ಕುಟುಂಬಗಳ ಸಂಖ್ಯೆ ಏರುಗತಿಯಲ್ಲಿದೆ. ಈಗಲೂ ಬಿಪಿಎಲ್ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ ಮೂರು ಲಕ್ಷಕ್ಕೂ ಹೆಚ್ಚು ಅರ್ಜಿಗಳು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ವಿಲೇವಾರಿಗೆ ಬಾಕಿ ಇವೆ. ರಾಜ್ಯದಲ್ಲಿ ಬಡವರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ವರದಿಗಳು ಬಂದಿರುವಾಗಲೇ ಬಿಪಿಎಲ್ ಪಡಿತರ ಚೀಟಿಗಳ ಸಂಖ್ಯೆಯಲ್ಲಿ ಅಗಾಧವಾದ ಏರಿಕೆಯಾಗುತ್ತಿರುವ ವೈರುಧ್ಯದ ಹಿಂದೆ ಗಂಭೀರವಾದ ಸಮಸ್ಯೆಗಳಿ
ರುವುದು ಗೋಚರಿಸುತ್ತಿದೆ. ಬಹುತೇಕ ಫಲಾನುಭವಿಗಳು ಸರ್ಕಾರಿ ಯೋಜನೆಗಳ ಅನುಕೂಲ ಪಡೆಯುವ ಉದ್ದೇಶದಿಂದ ತಮ್ಮ ಆದಾಯದ ನೈಜ ಮಾಹಿತಿಯನ್ನು ಮುಚ್ಚಿಟ್ಟು, ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಹೇಳಿದ್ದಾರೆ. ಬಡವರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಮತ್ತು ಆರ್ಥಿಕ ಪ್ರಗತಿಯಲ್ಲಿ ಅವರನ್ನೂ ಒಳಗೊಳ್ಳುವ ಉದ್ದೇಶದಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳು, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದಂತಹ ಕನಿಷ್ಠ ಅಗತ್ಯಗಳನ್ನು ಬಡವರಿಗೆ ಒದಗಿಸಲು ಫಲಾನುಭವಿಗಳ ಆಯ್ಕೆಯಲ್ಲಿ ಬಿಪಿಎಲ್ ಪಡಿತರ ಚೀಟಿಯನ್ನೇ ಮಾನದಂಡವಾಗಿ ಪರಿಗಣಿಸಲಾಗುತ್ತಿದೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳ ಅನುಷ್ಠಾನಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಬಳಿ ಇರುವ ಪಡಿತರ ಚೀಟಿದಾರರ ಮಾಹಿತಿಯ ದತ್ತಾಂಶವನ್ನೇ ಬಳಸಲಾಗುತ್ತಿದೆ.

ವಾರ್ಷಿಕ ಆದಾಯ, ಭೂ ಒಡೆತನ ಸೇರಿದಂತೆ ಕೆಲವು ಮಾನದಂಡಗಳ ಆಧಾರದಲ್ಲಿ ಕಂದಾಯ ಇಲಾಖೆಯು ನೀಡುವ ಆದಾಯ ಪ್ರಮಾಣಪತ್ರ ಆಧರಿಸಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪಡಿತರ ಚೀಟಿಗಳನ್ನು ವಿತರಿಸುತ್ತದೆ. ಈ ಪ್ರಕ್ರಿಯೆಯಲ್ಲಿ ಕಂದಾಯ ಇಲಾಖೆಯ ಹೊಣೆಗಾರಿಕೆಯೇ ಹೆಚ್ಚು. ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ನಕಲಿ ದಾಖಲೆಗಳ ಸೃಷ್ಟಿಯೂ ಸೇರಿದಂತೆ ಹಲವು ಕಾರಣಗಳು ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುತ್ತಿರುವುದು ಹೆಚ್ಚಲು ಕಾರಣ ಎಂಬುದು ನಿರ್ವಿವಾದ. ಇದಕ್ಕೆ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದ ಎಲ್ಲ ರಾಜಕೀಯ ಪಕ್ಷಗಳೂ ಕಾರಣ. ಅನರ್ಹ ಕುಟುಂಬಗಳು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಪ್ರಯತ್ನ ಹಲವು ಬಾರಿ ನಡೆದಿದೆ. ಆದರೆ, ಅದರಲ್ಲಿ ಸರ್ಕಾರವು ಯಶಸ್ಸು ಸಾಧಿಸಿದ ಉದಾಹರಣೆ ಕಡಿಮೆ. 2023ರಲ್ಲಿ 4.6 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಿದ್ದು, ₹ 13.5 ಕೋಟಿ ದಂಡ ವಸೂಲಿ ಮಾಡಲಾಗಿತ್ತು. ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದವರಲ್ಲಿ ಬಹುತೇಕ ಮಂದಿ ಸರ್ಕಾರಿ ನೌಕರರೇ ಆಗಿದ್ದರು. ಐಷಾರಾಮಿ ಕಾರುಗಳನ್ನು ಹೊಂದಿದ್ದು, ಹೆಚ್ಚು ವರಮಾನ ಇರುವ ಕಾರಣಕ್ಕಾಗಿ ಆದಾಯ ತೆರಿಗೆ ಪಾವತಿಸುತ್ತಿರುವ ಸಾವಿರಾರು ಮಂದಿಯೂ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಪತ್ತೆಯಾಗಿತ್ತು. ಅನರ್ಹ ಕುಟುಂಬಗಳು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಇನ್ನೂ ಅಪೂರ್ಣ ಸ್ಥಿತಿಯಲ್ಲೇ ಉಳಿದಿದೆ.

ಹಲವು ಯೋಜನೆಗಳ ಲಾಭವನ್ನು ಹೆಚ್ಚಾಗಿ ಅನರ್ಹ ಫಲಾನುಭವಿಗಳೇ ಕಬಳಿಸುತ್ತಿದ್ದಾರೆ. ಪರಿಣಾಮವಾಗಿ ನೈಜ ಫಲಾನುಭವಿಗಳಾಗಬೇಕಿದ್ದವರು, ಬಡವರು, ಸಮಾಜದ ಕೆಳಸ್ತರದಲ್ಲಿರುವವರು ಮೂಲೆಗುಂಪಾಗುತ್ತಿದ್ದು, ಹೆಚ್ಚಿನ ಸೌಲಭ್ಯಗಳು ಅವರನ್ನು ತಲುಪುತ್ತಿಲ್ಲ. ಅನರ್ಹರು ಪಡೆದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಎರಡು ವಾರಗಳೊಳಗೆ ಹಿಂತಿರುಗಿಸಬೇಕು ಅಥವಾ ದಂಡ ಪಾವತಿಸಬೇಕು ಎಂಬ ಎಚ್ಚರಿಕೆಯನ್ನು ನೀಡುವಂತೆ ಸುಪ್ರೀಂ ಕೋರ್ಟ್ 2010ರಲ್ಲಿ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಆ ನಿರ್ದೇಶನವು ಕಾಗದದ ಮೇಲೆಯೇ ಉಳಿದಿದೆ. ಅನರ್ಹ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಪಡೆದು ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಕಬಳಿಸುತ್ತಿರುವುದು ರಾಜ್ಯ ಸರ್ಕಾರದ ಆರ್ಥಿಕ ವ್ಯವಸ್ಥೆಗೆ ದೊಡ್ಡ ಸವಾಲು ಕೂಡ ಆಗಿದೆ. ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಹೆಚ್ಚುವುದಕ್ಕೂ ಅನರ್ಹ ಬಿಪಿಎಲ್ ಪಡಿತರ ಚೀಟಿಗಳ ಪಾಲು ದೊಡ್ಡದಿದೆ. ಅನರ್ಹ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ, ರದ್ದುಗೊಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರಬೇಕು. ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯುವವರು ಮತ್ತು ಅವುಗಳನ್ನು ವಿತರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸುವ ಕಾನೂನು ರೂಪಿಸದಿದ್ದರೆ ಈ ಸಮಸ್ಯೆಯನ್ನು ಶಾಶ್ವತವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ಕಾನೂನು ರೂಪಿಸುವ ದಿಸೆಯಲ್ಲಿ ಸರ್ಕಾರ ದೃಢವಾದ ಹೆಜ್ಜೆ ಇರಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.