ನವದೆಹಲಿ, ನ. 3 (ಪಿಟಿಐ, ಯುಎನ್ಐ)– ಭೀಕರ ಚಂಡಮಾರುತದಿಂದ ತೀವ್ರ ಹಾನಿಗೊಳಗಾಗಿರುವ ಒರಿಸ್ಸಾದಲ್ಲಿ ಇಂದು ಪ್ರಥಮ ಬಾರಿಗೆ ಸೂರ್ಯ ಕಾಣಿಸಿಕೊಂಡಿದ್ದು, ಸಾಮಾನ್ಯ ಸ್ಥಿತಿಯತ್ತ ಮರಳುತ್ತಿದೆ. ಸೇನಾಪಡೆ ಪರಿಹಾರ ಕಾರ್ಯ ಚುರುಕುಗೊಳಿಸಿದೆ.

‘ರೈತರ ಸಮಸ್ಯೆಗೆ ಸ್ಪಂದಿಸದ ಸಂಶೋಧನೆ’

ಬೆಂಗಳೂರು, ನ. 3– ರಾಜ್ಯದ ಎರಡೂ ಕೃಷಿ ವಿಶ್ವವಿದ್ಯಾಲಯಗಳು ರೈತರ ಸಮಸ್ಯೆಗಳಿಗೆ ಕ್ಷಿಪ್ರವಾಗಿ ಸ್ಪಂದಿಸುವಲ್ಲಿ ಹಿಂದೆ ಬಿದ್ದಿವೆ ಹಾಗೂ ಅವುಗಳ ಸಂಶೋಧನೆಗಳ ಫಲ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಕೃಷಿ ಸಚಿವ ಟಿ.ಬಿ.ಜಯಚಂದ್ರ ಇಂದು ಕೃಷಿ ವಿಜ್ಞಾನಿಗಳನ್ನು ತರಾಟೆಗೆ ತೆಗೆದುಕೊಂಡರು.

ಅವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ಮೂರು ದಿನಗಳ ‘ಕೃಷಿ ಮೇಳ’ವನ್ನು ಉದ್ಘಾಟಿಸಿ, ರೈತರ ಸಮಸ್ಯೆಗಳಿಗೆ ಕೃಷಿ ವಿಶ್ವವಿದ್ಯಾಲಯಗಳಿಗಿಂತ ಖಾಸಗಿ ಸಂಸ್ಥೆಗಳು ಕ್ಷಿಪ್ರವಾಗಿ ಸ್ಪಂದಿಸುತ್ತಿವೆ. ಈ ಹಿನ್ನೆಲೆಯಲ್ಲಿ ರೈತರು ಖಾಸಗಿ ವಲಯದತ್ತ ಒಲವು ತೋರಿಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.