ಗಂಗೂಬಾಯಿ ಹಾನಗಲ್‌ಗೆ ದೆಹಲಿ ವಿ.ವಿ ಡಾಕ್ಟರೇಟ್

ಹುಬ್ಬಳ್ಳಿ, ಡಿ. 8– ಸುಪ್ರಸಿದ್ಧ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರಿಗೆ ವಿಶ್ವವಿದ್ಯಾಲಯವು ಈ ತಿಂಗಳ 13ರಂದು ಡಾಕ್ಟರೇಟ್ ಪದವಿ ನೀಡಿ ಗೌರವಿಸಲಿದೆ.

ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಅವರಿಗೆ ಈ ಪದವಿ ನೀಡಲಾಗುತ್ತಿದೆ. ದೆಹಲಿ ವಿಶ್ವವಿದ್ಯಾಲಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆಯಲಿರುವ ವಿಶೇಷ ಪದವಿ ಪ್ರಧಾನ ಸಮಾರಂಭದಲ್ಲಿ ಈ ಪದವಿ ನೀಡಿ ಗೌರವಿಸಲಾಗುವುದು ಎಂದು ವಿ.ವಿ ಕುಲಸಚಿವರು, ಗಂಗೂಬಾಯಿ ಹಾನಗಲ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವನಾಂಚಲ: 11 ಬಿಜೆಪಿ ಸದಸ್ಯರ ರಾಜೀನಾಮೆ

ನವದೆಹಲಿ, ಡಿ. 8 (ಪಿಟಿಐ)– ಪ್ರತ್ಯೇಕ ವನಾಂಚಲ ರಾಜ್ಯ ಸ್ಥಾಪನೆಗೆ ಅವಕಾಶ ನೀಡುವ ಮಸೂದೆಯನ್ನು ಲೋಕಸಭೆಯ ಪ್ರಸ್ತುತ ಅಧಿವೇಶನದಲ್ಲೇ ಮಂಡಿಸದಿದ್ದರೆ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ 11 ಮಂದಿ ಬಿಜೆಪಿ ಸದಸ್ಯರು ಬೆದರಿಕೆ ಹಾಕಿದ್ದಾರೆ.

ಈ ಕುರಿತು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪತ್ರ ಬರೆದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಗ್ಗೆ ಆಶ್ವಾಸನೆ ನೀಡಿತ್ತು ಎಂದು ನೆನಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.