‘ನಗರ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ಔಷಧಿ ಮಳಿಗೆ ತೆರೆಯಲು ಅನುಮತಿ ನೀಡದಿರಲು ಉದ್ದೇಶಿಸಲಾಗಿದೆ’ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಇದರಿಂದ ತುರ್ತು ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚಾಗುತ್ತದೆ. ನಮ್ಮ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಔಷಧ ದಾಸ್ತಾನು ಎಷ್ಟರಮಟ್ಟಿಗೆ ಸರಿ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಎಲ್ಲಾ ಔಷಧಗಳು ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯ ಇಲ್ಲ ಎನ್ನುವುದು ಸತ್ಯ.

ಹೆರಿಗೆ, ಅಪಘಾತ, ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಬೇಕಾಗುವ ಔಷಧಗಳು ಹತ್ತಿರದ ಖಾಸಗಿ ಔಷಧದ ಅಂಗಡಿಯಲ್ಲಿ ಸಿಕ್ಕಿದರೆ ರೋಗಿ ಬದುಕುಳಿಯುವ ಅವಕಾಶ ಇರುತ್ತದೆ. ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಔಷಧ ಮಳಿಗೆಗಳನ್ನು ದೂರ ಇಡುವ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುವ ಅನುಕೂಲವಾದರೂ ಏನು?

–ವಿ.ತಿಪ್ಪೇಸ್ವಾಮಿ, ಹಿರಿಯೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.