ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ ಸರ್ಕಾರ ಶಾಲಾ ಕಾಲೇಜು ಆರಂಭಿಸಿರುವುದು ಸ್ವಾಗತಾರ್ಹ. ಇದರಿಂದ ಆನ್‌ಲೈನ್ ಪಾಠದ ಸಂದರ್ಭದಲ್ಲಿ ಎದುರಾಗುತ್ತಿದ್ದ ಅನೇಕ ಸಮಸ್ಯೆಗಳಿಂದ ತಾತ್ಕಾಲಿಕ ಮುಕ್ತಿ ದೊರೆತಂತಾಗಿದೆ. ಆದರೆ ಹಳ್ಳಿಗಳಿಂದ ಸಮೀಪದ ನಗರ, ಪಟ್ಟಣದ ಶಾಲೆಗಳಿಗೆ ಹೋಗಲು ಮಕ್ಕಳು, ಸರ್ಕಾರ ನೀಡುವ ರಿಯಾಯಿತಿ ದರದ ಪಾಸನ್ನೇ ಅವಲಂಬಿಸಿದ್ದಾರೆ. ಶಾಲೆ ಪ್ರಾರಂಭಿಸಿರುವ ಸರ್ಕಾರ, ಬಸ್‌ಪಾಸ್‌ಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ತೆಗೆದುಕೊಂಡಿಲ್ಲ. ಕೋವಿಡ್‌ನಿಂದ ಆಥಿ೯ಕ ಸಂಕಷ್ಟ ಎದುರಿಸುತ್ತಿರುವ ಪಾಲಕರಿಗೆ ಮಕ್ಕಳ ಪ್ರಯಾಣ ವೆಚ್ಚವನ್ನು ಭರಿಸಲಾಗುತ್ತಿಲ್ಲ. ಹೀಗಾಗಿ ಸಾರಿಗೆ ಸಚಿವರು ಸೂಕ್ತ ಕ್ರಮ ಕೈಗೊಂಡು, ಸುಗಮ ಶೈಕ್ಷಣಿಕ ಚಟುವಟಿಕೆಗೆ ಅವಕಾಶ ಮಾಡಿಕೊಡಲಿ.

ರೇಣುಕಾ ಬಿ. ಗೊಡಚಿ,ಧಾರವಾಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.