ಎಂಟನೇ ತರಗತಿಯಲ್ಲಿ ಓದುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಶಿಷ್ಯವೇತನ ನೀಡಿ ಪ್ರತಿಭೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಯನ್ನು (ಎನ್‌ಟಿಎಸ್‌ಇ)ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ (ಡಿಎಸ್‌ಇಆರ್‌ಟಿ) ಪ್ರತಿ ವರ್ಷ ಹಮ್ಮಿಕೊಳ್ಳುತ್ತದೆ.

`ಎನ್‌ಟಿಎಸ್‌ಇ~ಯಲ್ಲಿ ರಾಜ್ಯ ಮಟ್ಟದಲ್ಲಿ ಆಯ್ಕೆಯಾಗಿ ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗದ ವಿದ್ಯಾರ್ಥಿಗಳಿಗೂ ಸಹ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ಮಾಸಿಕ ರೂ.200 ರಂತೆ ಎರಡು ವರ್ಷಗಳ ಕಾಲ ಶಿಷ್ಯವೇತನ ನೀಡಬೇಕು ಎಂಬ ನಿಯಮವಿದೆ.

ಆದರೆ ರಾಜ್ಯ ಮಟ್ಟದ `ಎನ್‌ಟಿಎಸ್‌ಇ~ಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಳೆದ 2-3 ವರ್ಷಗಳಿಂದ ಶಿಷ್ಯವೇತನ ಸಂದಾಯವಾಗಿಲ್ಲ. ಈ ಕುರಿತು ಬೆಂಗಳೂರಿನ ಡಿಎಸ್‌ಇಆರ್‌ಟಿ ಸಂಸ್ಥೆಯನ್ನು ಸಂಪರ್ಕಿಸಿದಾಗ ಯಾವುದೇ ಮಾಹಿತಿ ದೊರೆಯುವುದಿಲ್ಲ. ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳಿಗೂ ಉತ್ತರವಿಲ್ಲ.
ಹಾಗಿದ್ದರೆ ಪ್ರತಿಭಾನ್ವೇಷಣೆ ಪರೀಕ್ಷೆಯನ್ನು ನಡೆಸುವುದೇಕೆ? ಶಿಷ್ಯವೇತನ ಸಂದಾಯವಾಗದೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸುವುದಾದರೂ ಹೇಗೆ? ಈ ಎಲ್ಲ ಪ್ರಶ್ನೆಗಳ ಪರಿಹಾರಾರ್ಥವಾಗಿ ಶಿಷ್ಯವೇತನ ಹಣ ಬಿಡುಗಡೆಗೆ ಡಿಎಸ್‌ಇಆರ್‌ಟಿ ಸಂಸ್ಥೆ ಅಥವಾ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಸಂಸ್ಥೆ ಈಗಲಾದರೂ ಮುಂದಾಗಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.