ಅಡಿಲೇಡ್: ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆ್ಯಷಸ್ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಪ್ರಸಾರ ತಂಡದ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಹಗಲು-ರಾತ್ರಿ ಟೆಸ್ಟ್ ಪಂದ್ಯವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಸೋಂಕಿತ ಸಿಬ್ಬಂದಿ ಬಗ್ಗೆ ಮಾಹಿತಿ ದೊರಕಿದ್ದು, ನಿಕಟ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಲು ಸೂಚಿಸಲಾಗಿದೆ ಎಂದು ಸೌತ್ ಆಸ್ಟ್ರೇಲಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ವರದಿಗಳ ಪ್ರಕಾರ, ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಬೌಲರ್ ಗ್ಲೆನ್ ಮೆಕ್‌ಗ್ರಾಥ್ ಮತ್ತು ಇಂಗ್ಲೆಂಡ್‌ನ ವಿಶ್ವಕಪ್ ವಿಜೇತೆ ಮಾಜಿ ಆಟಗಾರ್ತಿ ಇಶಾ ಗುಹಾ ಅವರನ್ನು ಕರ್ತವ್ಯದಿಂದ ಹೊರಗಿರಿಸಲಾಗಿದೆ.

ಕೋವಿಡ್ ಪಾಸಿಟಿವ್ ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿದ್ದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್, ಪಿಂಕ್ ಬಾಲ್ ಟೆಸ್ಟ್ ಆರಂಭಕ್ಕೂ ಕೆಲವೇ ತಾಸಿಗೂ ಮುನ್ನ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದರಿಂದಾಗಿ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸುತ್ತಿದ್ದಾರೆ.

ಏತನ್ಮಧ್ಯೆ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ತಾಜಾ ವರದಿಗಳ ವೇಳೆಗೆ 400 ರನ್‌ಗಳ ಬೃಹತ್ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.