ಲಂಡನ್: ಅಫ್ಗಾನಿಸ್ತಾನ ಕ್ರಿಕೆಟ್ ತಂಡದ ಆಟಗಾರ ರಶೀದ್ ಖಾನ್ ಅವರು ತಮ್ಮ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆಗೊಗಾಗಿದ್ದಾರೆ.

ಇದರಿಂದಾಗಿ ಅವರು ಡಿ. 7ರಿಂದ ಆರಂಭವಾಗುವ ಬಿಗ್ ಬ್ಯಾಷ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವುದಿಲ್ಲ. ಅವರು ಅಡಿಲೇಡ್ ಸ್ಟ್ರೈಕರ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

‘ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ಎದುರು ಅಫ್ಗಾನಿಸ್ತಾನ ಜಯಿಸುವಲ್ಲಿ ರಶೀದ್ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅನುಭವ ಮತ್ತು ಆಟ ಎರಡೂ ತಂಡದ ಬಲ ಹೆಚ್ಚಿಸಿವೆ. ತಮ್ಮ ಕೆಳಬೆನ್ನಿನ ಗಾಯಕ್ಕೆ ಇಂಗ್ಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ’ ಎಂದು ಅಫ್ಗನ್ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.