ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ICC Women's T20 World Cup | ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Published : 3 ಅಕ್ಟೋಬರ್ 2024, 11:10 IST
Last Updated : 3 ಅಕ್ಟೋಬರ್ 2024, 11:10 IST
ಫಾಲೋ ಮಾಡಿ
Comments

ದುಬೈ: ಬಹುನಿರೀಕ್ಷಿತ ಐಸಿಸಿ ಮಹಿಳೆಯರ ಟ್ವೆಂಟಿ-20 ವಿಶ್ವಕಪ್‌ ಟೂರ್ನಿಗೆ ಇಂದು ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಸ್ಕಾಟ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಅಕ್ಟೋಬರ್ 3ರಿಂದ 20ರವರೆಗೆ ವಿಶ್ವಕಪ್ ಟೂರ್ನಿ ನಡೆಯಲಿದೆ. ಟೂರ್ನಿಯ ಪಂದ್ಯಗಳು ದುಬೈ ಮತ್ತು ಶಾರ್ಜಾದಲ್ಲಿ ನಡೆಯಲಿವೆ.

10 ತಂಡ, ಎರಡು ಗುಂಪು...

ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಎರಡು ಗುಂಪುಗಳಾಗಿ ತಂಡಗಳನ್ನು ವಿಭಜಿಸಲಾಗಿದೆ. ಅಗ್ರ ಎರಡು ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.

ಅಕ್ಟೋಬರ್ 17ರಂದು ಹಾಗೂ 18ರಂದು ಸೆಮಿಫೈನಲ್ ಪಂದ್ಯಗಳು ನಿಗದಿಯಾಗಿವೆ. ಅಕ್ಟೋಬರ್ 20ರಂದು ದುಬೈಯಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡವು 'ಎ' ಗುಂಪಿನಲ್ಲಿ ಆಡಲಿದೆ. ಇದೇ ಗುಂಪಿನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಕೂಡಾ ಇದ್ದು, ಉಳಿದಂತೆ ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ಶ್ರೀಲಂಕಾ ಇವೆ.

'ಬಿ' ಗುಂಪಿನಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ವೆಸ್ಟ್‌ಇಂಡೀಸ್, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳಿವೆ.

ಪಾಕ್ ವಿರುದ್ಧ ಹೈವೋಲ್ಟೇಜ್ ಪಂದ್ಯ...

ಹರ್ಮನ್‌ಪ್ರೀತ್ ಕೌರ್ ಬಳಗವು ಅಕ್ಟೋಬರ್ 4ರಂದು ದುಬೈಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 6, ಭಾನುವಾರ ನಡೆಯಲಿದೆ.

ಭಾರತ ತಂಡದ ವೇಳಾಪಟ್ಟಿ ಇಂತಿದೆ:

ಅ.4: ಭಾರತ vs ನ್ಯೂಜಿಲೆಂಡ್, ದುಬೈ, ರಾತ್ರಿ 7.30

ಅ.6: ಭಾರತ vs ಪಾಕಿಸ್ತಾನ, ದುಬೈ, ಸಂಜೆ 3.30

ಅ.9: ಭಾರತ vs ಶ್ರೀಲಂಕಾ, ದುಬೈ, ರಾತ್ರಿ 7.30

ಅ.13: ಭಾರತ vs ಆಸ್ಟ್ರೇಲಿಯಾ, ಶಾರ್ಜಾ, ರಾತ್ರಿ 7.30

(ಭಾರತೀಯ ಕಾಲಮಾನ)

ಭಾರತದ ವೇಳಾಪಟ್ಟಿ

ಭಾರತದ ವೇಳಾಪಟ್ಟಿ

(ಚಿತ್ರ ಕೃಪೆ: X/@BCCIWomen)

ಈ ಮೊದಲು ಬಾಂಗ್ಲಾದೇಶದಲ್ಲಿ ನಡೆಯಲಿದ್ದ ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಸ್ಥಳಾಂತರಿಸಲಾಗಿತ್ತು.

ಸಂಪೂರ್ಣ ವೇಳಾಪಟ್ಟಿಗಾಗಿ ಈ ಲಿಂಕ್ ಕ್ಲಿಕ್ಕಿಸಿರಿ...

ಭಾರತ ಮಹಿಳಾ ತಂಡ ಇಂತಿದೆ:

ಹರ್ಮನ್‌ಪ್ರೀತ್ ಕೌರ್‌ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್‌, ರಿಚಾ ಘೋಷ್‌ (ವಿಕೆಟ್ ಕೀಪರ್‌), ಯಷ್ಟಿಕಾ ಭಾಟಿಯಾ (ವಿಕೆಟ್ ಕೀಪರ್‌), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್‌, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್‌, ಶ್ರೇಯಾಂಕಾ ಪಾಟೀಲ, ಸಂಜನಾ ಸಜೀವನ್.

ಟಿ20 ಮಹಿಳಾ ವಿಶ್ವಕಪ್‌ನಲ್ಲಿ ಸಾಧನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT