ಸಿಡ್ನಿ: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಶನಿವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ.

ಟೌನ್ಸ್‌ವಿಲ್ಲೆಯಿಂದ ಸುಮಾರು 50 ಕಿ.ಮೀ. ವ್ಯಾಪ್ತಿಯ ಹಾರ್ವೇ ರೇಂಜ್ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಮಧ್ಯರಾತ್ರಿ 11ರ ಸುಮಾರಿಗೆ ಹಾರ್ವೇ ರೇಂಜ್ ರಸ್ತೆಯಲ್ಲಿ ಸೈಮಂಡ್ಸ್ ಕಾರು ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಸೈಮಂಡ್ಸ್ ಒಬ್ಬರೇ ಇದ್ದರು. ಅಲೈಸ್ ರಿವರ್ ಬ್ರಿಡ್ಜ್ ಸಮೀಪ ನಿಯಂತ್ರಣ ತಪ್ಪಿದ ಕಾರು ರಸ್ತೆಯಿಂದ ಹೊರಗೆ ಸಂಚರಿಸಿ, ಪಲ್ಟಿಯಾಗಿದೆ ಎಂದು ಪೊಲೀಸರು ವರದಿಯಲ್ಲಿ ಹೇಳಿದ್ದಾರೆ.

ತುರ್ತು ಸೇವಾ ತಂಡವು 46 ವರ್ಷದ ಸೈಮಂಡ್ಸ್ ಅವರ ಜೀವ ಉಳಿಸಲು ಪ್ರಯತ್ನ ನಡೆಸಿದ್ದು, ಸಫಲವಾಗಿಲ್ಲ.

1998ರಿಂದ 2009 ನಡುವೆ ಒಟ್ಟು 198 ಏಕದಿನ, 26 ಟೆಸ್ಟ್ ಹಾಗೂ 14 ಟಿ-20 ಪಂದ್ಯಗಳಲ್ಲಿ ಸೈಮಂಡ್ಸ್ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. 2003 ಮತ್ತು 2007ರ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದು ನಿಜಕ್ಕೂ ತುಂಬಾ ನೋವನ್ನುಂಟು ಮಾಡಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಆ್ಯಡಂ ಗಿಲ್‌ಕ್ರಿಸ್ಟ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.